ಸೋಮವಾರಪೇಟೆ, ಅ. ೧೨: ಇಲ್ಲಿನ ರೋಟರಿ ಸಂಸ್ಥೆಯ ವತಿಯಿಂದ ಕನ್ನಡ ಮಾಧ್ಯಮ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಸೇತು ಯೋಜನೆಯಡಿ ವಿಶೇಷ ಕೈಪಿಡಿಗಳನ್ನು ವಿತರಿಸಲಾಯಿತು.

ಐಗೂರಿನ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಎಂ.ಎA. ಪ್ರಕಾಶ್ ಕುಮಾರ್ ವಿದ್ಯಾರ್ಥಿಗಳಿಗೆ ಕೈಪಿಡಿ ವಿತರಿಸಿದರು. ನಂತರ ಮಾತನಾಡಿ, ಕೊರೊನಾ ಲಾಕ್‌ಡೌನ್ ಹಿನ್ನೆಲೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತಗೊAಡಿತ್ತು. ಈ ಹಿನ್ನೆಲೆ ರೋಟರಿ ಮೂಲಕ ಶಿಕ್ಷಣ ತಜ್ಞರ ನೇತೃತ್ವದಲ್ಲಿ ವಿಶೇಷ ಕೈಪಿಡಿ ಸಿದ್ಧಪಡಿಸಲಾಗಿದ್ದು, ಇದು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿದೆ ಎಂದರು. ತಾಲೂಕಿನ ನೇರುಗಳಲೆ, ಕಿರಗಂದೂರು, ಐಗೂರು, ಮಾದಾಪುರ ಸೇರಿದಂತೆ ಇತರ ಸರ್ಕಾರಿ ಶಾಲೆಗಳ ೩೮೦ ವಿದ್ಯಾರ್ಥಿಗಳಿಗೆ ಕೈಪಿಡಿ ವಿತರಿಸಲಾಗುತ್ತಿದೆ ಎಂದು ರೋಟರಿ ಮಾಜಿ ಅಧ್ಯಕ್ಷ ಪಿ.ಕೆ. ರವಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ಧರ್ಮಪ್ಪ, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಯಶ್ವಂತ್, ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಉಮೇಶ್, ಶಾಲಾ ಶಿಕ್ಷಕಿ ರಂಜಿನಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.