ಗೋಣಿಕೊಪ್ಪಲು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಪಕ್ಷದ ಕಾರ್ಯಕರ್ತರು, ವಿವಿಧ ಮೋರ್ಚಾದ ಪದಾಧಿಕಾರಿಗಳು ಮೋದಿ ಅವರ ಸೇವಾ ಸಮರ್ಪಣಾ ದಿನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ್ದಾರೆ. ಇದರ ಅಂಗವಾಗಿ ಬಿಪಿಎಲ್ ಪಡಿತರದಾರರಿಗೆ ಉಚಿತವಾಗಿ ಬಟ್ಟೆ ಚೀಲ ವಿತರಣೆ ನಡೆಸಲಾಗಿದೆ. ಇದರ ಪ್ರಯೋಜನ ಅರ್ಹರು ಪಡೆದುಕೊಳ್ಳುವಂತೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ಗೋಣಿಕೊಪ್ಪ ಸಮೀಪದ ಕೈಕೇರಿ ನ್ಯಾಯ ಬೆಲೆ ಅಂಗಡಿಯಲ್ಲಿ ಬಿಜೆಪಿ ತಾಲೂಕು ಒಬಿಸಿ ಮೋರ್ಚಾದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ನರೇಂದ್ರ ಮೋದಿ ಅವರ ಸೇವಾ ಸಮರ್ಪಣ ಕಾರ್ಯಕ್ರಮದಲ್ಲಿ ಉಚಿತ ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರವು ಬಡಜನತೆಗೆ ಹಲವು ಯೋಜನೆಗಳನ್ನು ನೀಡುತ್ತಿದ್ದು ಇದರ ಪ್ರಯೋಜನೆ ಪಡೆಯುವಂತೆ ಇದೆ ಸಂದರ್ಭ ಕೆ.ಜಿ. ಬೋಪಯ್ಯ ಕರೆ ನೀಡಿದರು.
ಹಾತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಪ್ಪಂಡ ಗಿರೀಶ್ ಪೂವಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಸೇವಾ ಸಮರ್ಪಣಾ ಸಮಿತಿಯ ಉಸ್ತುವಾರಿ, ಗೋಣಿಕೊಪ್ಪ ಆರ್.ಎಂ.ಸಿ. ಸದಸ್ಯರಾದ ಗುಮ್ಮಟ್ಟೀರ ಕಿಲನ್ ಗಣಪತಿ ಪ್ರಾಸ್ತವಿಕವಾಗಿ ಮಾತನಾಡಿ, ಸೆ. ೧೭ ರಿಂದ ಅ. ೭ ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ಬಿಜೆಪಿ ಪಕ್ಷ ಹಮ್ಮಿಕೊಂಡಿದೆ. ಗಿಡ ನೆಡುವುದು, ಹಣ್ಣುಹಂಪಲು ವಿತರಣೆ, ರಕ್ತದಾನ ಶಿಬಿರ ಸೇರಿದಂತೆ ಉಚಿತ ಬ್ಯಾಗ್‌ಗಳನ್ನು ನೀಡುವ ಕಾರ್ಯಕ್ರಮ ನಡೆದಿದೆ. ಜಿಲ್ಲೆಯಲ್ಲಿ ೧,೪೦,೫೩೬ ಬಿಪಿಎಲ್ ಫಲಾನುಭವಿಗಳಿದ್ದಾರೆ. ೨೦ ದಿನಗಳು ವಿಶೇಷ ಕಾರ್ಯಕ್ರಮಗಳು ಜಿಲ್ಲೆಯ ಎಲ್ಲೆಡೆಗಳಲ್ಲಿ ನಡೆದಿದೆ ಎಂದರು.
ಕಾರ್ಯಕ್ರಮದಲ್ಲಿ ಅಕ್ರಮ-ಸಕ್ರಮ ಸಮಿತಿಯ ತಾಲೂಕು ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಕೆ. ಬೋಪಣ್ಣ, ಸೇವಾ ಸಮರ್ಪಣಾ ತಾಲೂಕು ಉಸ್ತುವಾರಿಕೆ. ರಾಜೇಶ್, ಗಣೇಶ್, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರ, ಗ್ರಾಮ ಪಂಚಾಯಿತಿ ಸದಸ್ಯರಾದ ಸೌಮ್ಯ ಬಾಲು, ಚೇತನ್ ಹಾತೂರು ಗ್ರಾಮ ಪಂಚಾಯಿತಿ ಸದಸ್ಯರಾದ ಜಮ್ಮಡ ಲವ, ವಿಷ್ಮ, ಮುತ್ತುರಾಜ್, ನಮಿತಾ, ರೇಖಾ, ಕುಶ ಬಿದ್ದಪ್ಪ ಮುಂತಾದವರು ಉಪಸ್ಥಿತರಿದ್ದರು. ಬಿಜೆಪಿ ಒಬಿಸಿ ಘಟಕದ ತಾಲೂಕು ಉಪಾಧ್ಯಕ್ಷ ಬಿ.ಎನ್. ಪ್ರಕಾಶ್ ಸ್ವಾಗತಿಸಿ, ವಂದಿಸಿದರು.ಮರಗೋಡು-ಕಟ್ಟೆಮಾಡು: ಕೊಡಗು ಜಿಲ್ಲಾ ರೈತ ಮೋರ್ಚಾ ವತಿಯಿಂದ ಸೇವಾ ಸಮರ್ಪಣಾ ಅಭಿಯಾನದ ಸಮಾರೋಪ ಕಾರ್ಯಕ್ರಮ ಮರಗೋಡುವಿನ ಕಟ್ಟೆಮಾಡು ಗ್ರಾಮದ ಪ್ರಗತಿ ಪರ ಕೃಷಿಕ ಪ್ರದೀಪ್ ತೋಟಂಬೈಲ್ ಅವರ ಮನೆ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಅಭಿಯಾನದ ವಿಶೇಷತೆ, ಕಾರ್ಯಕ್ರಮದ ಉದ್ದೇಶ, ಮುಂದಿನ ಯೋಜನೆಗಳ ಕುರಿತು ರಾಜ್ಯ ಕೃಷಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ. ನವೀನ್ ಕುಮಾರ್ ಮಾಹಿತಿ ನೀಡಿದರು. ಕೃಷಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಭಾ.ಜ.ಪ. ಪಕ್ಷ ಬೆಳೆದು ಬಂದ ರೀತಿ, ಕೃಷಿ ಮೋರ್ಚಾದ ಕೆಲಸ ಕಾರ್ಯಗಳ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಗೋಪೂಜೆ ಮಾಡಲಾಯಿತು. ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಕಾಂಗೀರ ಸತೀಶ್, ಪ್ರಧಾನ ಕಾರ್ಯದರ್ಶಿ ಕೋಡಿರ ಪ್ರಸನ್ನ, ಜಿಲ್ಲಾ ರೈತ ಮೋರ್ಚಾದ ಕಾರ್ಯದರ್ಶಿ ಪೈಕೇರ ಮನೋಹರ್ ಮಾದಪ್ಪ, ತಾಲೂಕು ರೈತ ಮೋರ್ಚಾದ ಅಧ್ಯಕ್ಷ ಜಗದೀಶ್ ಶಿವಚಾಳಿಯಂಡ, ಮಹಿಳಾ ಮೋರ್ಚಾದ ಅಧ್ಯಕ್ಷೆ ಕವಿತ ಬಡುವಂಡ್ರ, ಹಿಂದುಳಿದ ಮೋರ್ಚಾದ ಅಧ್ಯಕ್ಷ ಗಿರೀಶ್, ತಾಲೂಕು ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕುಮುದ ರಶ್ಮಿ, ಖಜಾಂಚಿ ರೀತಾ ಸುದರ್ಶನ್, ಹೊಸ್ಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭುಶೇಖರ್ ಹಾಗೂ ಪಕ್ಷದ ಹಿರಿಯ ಹಾಗೂ ಕಿರಿಯ ಕಾರ್ಯಕರ್ತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.ಮೇಕೇರಿ: ಸೇವಾ ಸಮರ್ಪಣಾ ಅಭಿಯಾನದ ಸಮಾರೋಪ ಸಮಾರಂಭ ಕಾರ್ಯಕ್ರಮ ಮೇಕೇರಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಕೇರಿ ಶಕ್ತಿ ಕೇಂದ್ರದ ಬೂತ್ ಒಂದರ ಅಧ್ಯಕ್ಷ ಅಳಗರಾಜ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕೃಷಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ. ನವೀನ್‌ಕುಮಾರ್ ಅವರು ಹಾಗೂ ಕೊಡಗು ಜಿಲ್ಲಾ ಕೃಷಿ ಮೋರ್ಚಾದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಆಗಮಿಸಿದ್ದರು.
ವೇದಿಕೆಯಲ್ಲಿ ಮೇಕೇರಿ ಗ್ರಾಮದ ಪಕ್ಷದ ಹಿರಿಯರಾದ ಕಾಯರ ಬೆಳ್ಯಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಕ್ಷಿತ್ ಪೂಜಾರಿರ, ಕೊಡಗು ಜಿಲ್ಲಾ ಕೃಷಿ ಮೋರ್ಚಾದ ಕಾರ್ಯದರ್ಶಿಗಳಾದ ಪೈಕೇರ ಮನೋಹರ್ ಮಾದಪ್ಪ, ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ ಕವಿತಾ ಬೆಳ್ಯಪ್ಪ, ಯುವ ಮೋರ್ಚಾದ ಅಧ್ಯಕ್ಷ ಹೇಮಂತ್ ತೋರೆರ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕುಮುಧ ರಶ್ಮಿ, ತಾಲೂಕು ಮಹಿಳಾ ಮೋರ್ಚಾದ ಖಜಾಂಚಿ ರೀತಾ ಸುದರ್ಶನ್, ಮೇಕೇರಿ ಗ್ರಾಮ ಪಂಚಾಯಿತಿಯ ಸದಸ್ಯರು, ಮಾಜಿ ಸದಸ್ಯರು, ಪಕ್ಷದ ಹಿರಿಯರು, ಪಕ್ಷದ ಕಿರಿಯರು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಂತ್ಯದಲ್ಲಿ ಮೇಕೇರಿ ಹಾಗೂ ಬಿಳಿಗೇರಿ ಗ್ರಾಮದಲ್ಲಿ ಕೊರೊನಾ ಸಂಕಷ್ಟಕರ ಸಮಯದಲ್ಲಿ ಸೇವೆ ಸಲ್ಲಿಸಿದ ಕೊರೊನಾ ವಾರಿಯರ್ಸ್ಗಳಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತರಿಗೆ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪರ್ಲಕೋಟಿ ಕಾಂತ ಕಾವೇರಪ್ಪ ಸ್ವಾಗತಿಸಿ, ವಂದನಾರ್ಪಣೆಯನ್ನು ಶಕ್ತಿ ಕೇಂದ್ರದ ಸಹ ಪ್ರಮುಖ್ ಅಪ್ಪಣ್ಣ ವಂದಿಸಿದರು.