ಶನಿವಾರಸಂತೆ, ಅ. ೧೩: ಸಮೀಪದ ಕೊಡ್ಲಿಪೇಟೆಯ ಭದ್ರಮ್ಮ - ಮಹಾಂತಪ್ಪ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ನಡೆದ ನೂತನ ಜಿಲ್ಲಾ ಮಹಿಳಾ ಘಟಕ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಸಮಿತಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅರುಣಾದೇವಿ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಲ್ಲಾ ಘಟಕದ ಗೌರವಾಧ್ಯಕ್ಷ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಧ್ವಜವನ್ನು ನೂತನ ಘಟಕದ ಅಧ್ಯಕ್ಷೆ ಮಮತಾ ಸತೀಶ್ ಹಾಗೂ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ನೂತನ ಅಧ್ಯಕ್ಷೆಯಾಗಿ ಮಮತಾ ಸತೀಶ್ ಉಪಾಧ್ಯಕ್ಷರಾಗಿ ಎಸ್.ಆರ್. ಚೈತ್ರಾ, ಸಿ. ಪವಿತ್ರಾ, ಎಚ್.ಪಿ.ಭಾಗೀರಥಿ, ಕಲಾವತಿ, ಪ್ರಧಾನ ಕಾರ್ಯದರ್ಶಿ ಎ.ಪಿ. ರಾಧಾ, ಕಾರ್ಯದರ್ಶಿಗಳಾಗಿ ಸಿ.ಸಿ. ವಿದ್ಯಾ, ಜಿ.ಜಿ. ದಾಕ್ಷಾಯಿಣಿ, ಜಿ.ಎಸ್. ಯಶೋಧಾ, ಡಿ.ಎಸ್. ಚಂದ್ರಕಲಾ, ಖಜಾಂಚಿಯಾಗಿ ಕೆ.ಎಸ್. ಶಶಿಕಲಾ ಹಾಗೂ ಸದಸ್ಯರಾಗಿ ೨೦ ಮಹಿಳೆಯರು ಆಯ್ಕೆಯಾಗಿದ್ದಾರೆ.

ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ. ಶಿವಪ್ಪ, ಉಪಾಧ್ಯಕ್ಷ ಜಿ.ಎಂ. ಕಾಂತರಾಜ್, ಎಸ್.ಎಸ್. ಸುರೇಶ್, ಕಾರ್ಯದರ್ಶಿ ಶಾಂಭಶಿವಮೂರ್ತಿ, ಅರಮೇರಿ ಕಳಂಚೇರಿ ಮಠಾಧೀಶ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕನ್ನಡ ಮಠದ ಚನ್ನಬಸವದೇಶೀಕೇಂದ್ರ ಸ್ವಾಮೀಜಿ, ಕಲ್ಲಳ್ಳಿ ಮಠಾಧೀಶ ರುದ್ರಮುನಿ ಸ್ವಾಮೀಜಿ ಹಾಜರಿದ್ದರು.