ಮುಳ್ಳೂರು, ಅ. ೧೨: ೬೭ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮದ ಪ್ರಯುಕ್ತ ಅರಣ್ಯ ಇಲಾಖೆ ಪ್ರಾದೇಶಿಕ ವಿಭಾಗ, ಮಡಿಕೇರಿ ಮತ್ತು ಶನಿವಾರಸಂತೆ ಪ್ರಾದೇಶಿಕ ವಲಯ ವತಿಯಿಂದ ಕೊಡ್ಲಿಪೇಟೆ, ಆಲೂರು-ಸಿದ್ದಾಪುರ ಸರಕಾರಿ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಅರಣ್ಯ ಮತ್ತು ವನ್ಯಜೀವಿ ಜಾಗೃತಿ ಹಾಗೂ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಯಿತು.
ಆಲೂರು-ಸಿದ್ದಾಪುರ ಸರಕಾರಿ ಪ್ರೌಢಶಾಲೆಯ ಇಕೋಕ್ಲಬ್ ಮತ್ತು ಅರಣ್ಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮವನ್ನು ಶನಿವಾರಸಂತೆ ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿ ಪ್ರಪುಲ್ಶೆಟ್ಟಿ ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳು ಅರಣ್ಯ, ಪರಿಸರ, ವನ್ಯಜೀವಿ ಮಹತ್ವದ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಇದ್ದು ಇವುಗಳ ಬಗ್ಗೆ ತಾವು ಪ್ರಜ್ಞೆ ಬೆಳೆಸಿಕೊಳ್ಳುವ ಮೂಲPವಾಗಿ ಸಾರ್ವಜನಿಕರಲ್ಲೂ ಜಾಗೃತಿ ಮೂಡಿಸುವುದರಿಂದ ಅರಣ್ಯ ಸಸ್ಯ ಹಾಗೂ ವನ್ಯಜೀವಿ ಸಂಪತ್ತು ಸಮೃದ್ಧಿಗೊಳ್ಳುತ್ತದೆ ಎಂದರು. ಅರಣ್ಯದಲ್ಲಿರುವ ವಿವಿಧ ಸಸ್ಯರಾಶಿಗಳು, ವಿವಿಧ ಪ್ರಾಣಿ-ಪಕ್ಷಿ ಮುಂತಾದ ವನ್ಯಜೀವಿ ಆಹಾರ ಸರಪಳಿಯ ವಿಶೇಷತೆ ಬಗ್ಗೆ ಹಾಗೂ ಅರಣ್ಯ ಕಾಡ್ಗಿಚ್ಚು ಕುರಿತು ಅವರು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಎ.ಎಸ್. ಶ್ರುತಿ ಮಾತನಾಡಿ, ಅರಣ್ಯ ಇಲಾಖೆ ವತಿಯಿಂದ ಅರಣ್ಯ ಮತ್ತು ವನ್ಯಜೀವಿ ಸಂಪತ್ತಿನ ಬಗ್ಗೆ ಅರಿವು ಮೂಡಿಸುತ್ತಿರು ವುದರಿಂದ ಹಾಗೂ ಇವುಗಳ ಬಗ್ಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿ ರುವುದರಿಂದ ವಿದ್ಯಾರ್ಥಿಗಳಿಗೆ ಇವುಗಳ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಅಧಿಕಾರಿಗಳು ನೀಡಿದ ಮಾಹಿತಿಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ವನ್ಯಜೀವಿ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಸ್ಪರ್ಧಾ ವಿಜೇತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಅರಣ್ಯ ಅಧಿಕಾರಿಗಳಾದ ಶ್ರೀನಿವಾಸ್, ಶಿವಕುಮಾರ್, ಅರಣ್ಯ ರಕ್ಷಕರು ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.