ಕೂಡಿಗೆ, ಅ. ೧೩: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಮತ್ತು ವಿಜಯನಗರ ಬಿಜೆಪಿ ಬೂತ್ ಸಮಿತಿಯ ವತಿಯಿಂದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಪೌರ ಕಾರ್ಮಿಕರಿಗೆ ಗಾಂಧಿ ಜಯಂತಿಯ ಅಂಗವಾಗಿ ಮೂಡ್ಲಿಗೌಡ ಸಭಾಂಗಣದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭ ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ರಮೇಶ್, ಗ್ರಾ.ಪಂ. ಸದಸ್ಯ ಕೆ.ಕೆ. ಭೋಗಪ್ಪ, ತಾ.ಪಂ. ಮಾಜಿ ಸದಸ್ಯ ಗಣೇಶ್, ಕೆ. ವರದ ಹಾಜರಿದ್ದರು.

ಈ ಸಂದರ್ಭ ಬಸವನತ್ತೂರು ಬೂತ್ ಅಧ್ಯಕ್ಷ ಆರ್.ಕೆ. ಕೃಷ್ಣ, ವಿಜಯನಗರ ಬೂತ್ ಅಧ್ಯಕ್ಷ ಪುನೀತ್ ಸೇರಿದಂತೆ ಕೂಡುಮಂಗಳೂರು ಗ್ರಾ.ಪಂ. ಸದಸ್ಯರು, ಶಕ್ತಿ ಕೇಂದ್ರದ ಪ್ರಮುಖರು, ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ವಿವಿಧ ಬಿಜೆಪಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.