ಮಡಿಕೇರಿ, ಅ. ೧೩: ನಿಟ್ಟೂರು ಗ್ರಾಮ ಪಂಚಾಯಿತಿಯ ೨೦೨೦-೨೧ನೇ ಸಾಲಿನ ಜಮಾಬಂದಿ ಸಭೆ ತಾ. ೨೫ ರಂದು ಬೆಳಿಗ್ಗೆ ೧೧ ಗಂಟೆಗೆ ಗ್ರಾ.ಪಂ. ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷ ಚಕ್ಕೇರ ಎಂ. ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನಿಟ್ಟೂರು ಗ್ರಾಮ ಪಂಚಾಯಿತಿಯ ೨೦೨೦-೨೧ ಹಾಗೂ ೨೦೨೧-೨೨ನೇ ಸಾಲಿನ ಮೊದಲನೇ ಹಂತದ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ತಾ. ೨೫ ರಂದು ಮಧ್ಯಾಹ್ನ ೧೨ ಗಂಟೆಗೆ ಗ್ರಾ.ಪಂ. ಅಧ್ಯಕ್ಷ ಚಕ್ಕೇರ ಎಂ. ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಿಟ್ಟೂರು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ನಿಟ್ಟೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.