ಪ.ಪಂ. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಪಿ.ಕೆ.ಚಂದ್ರು

ಸೋಮವಾರಪೇಟೆ, ಅ. ೧೩: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ದಿನವೂ ಶುದ್ಧ ಕುಡಿಯುವ ನೀರು ಪೂರೈಕೆಯೊಂದಿಗೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತನ್ನ ಅಧಿಕಾರಾವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು ಭರವಸೆ ನೀಡಿದ್ದಾರೆ.

ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಪಿ.ಕೆ. ಚಂದ್ರು ಅವರು ಇಂದು ಪ.ಪಂ. ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ, ಅಧ್ಯಕ್ಷರ ಕೊಠಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಂಡು ‘ಶಕ್ತಿ’ ಯೊಂದಿಗೆ ಮಾತನಾಡಿದರು.

ಪ್ರತಿದಿನವೂ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು ಸರಬರಾಜಿಗೆ ಕ್ರಮ ಕೈಗೊಳ್ಳ ಲಾಗುವುದು. ಈಗಾಗಲೇ ಹಾರಂಗಿ ಹಾಗೂ ದುದ್ದುಗಲ್ಲು ಹೊಳೆಯಿಂದ ನೀರು ಸರಬರಾಜು ಮಾಡುತ್ತಿದ್ದು, ಫಿಲ್ಟರ್ ಹೌಸ್‌ನಲ್ಲಿ ೨೯ ಲಕ್ಷ ವೆಚ್ಚದ ದುರಸ್ತಿ ಕಾಮಗಾರಿ ನಡೆಯುತ್ತಿದೆ ಎಂದರು.

ಇದರೊAದಿಗೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸ ಲಾಗುವುದು. ಪಟ್ಟಣದಲ್ಲಿ ವಾಹನಗಳ ನಿಲುಗಡೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಪಿ.ಕೆ. ಚಂದ್ರು ಹೇಳಿದರು.

ಪಟ್ಟಣದಲ್ಲಿ ಅನೇಕ ದಶಕ ಗಳಿಂದಲೂ ನಿವೇಶನವಿಲ್ಲದೇ ಬಾಡಿಗೆ ಮನೆಗಳಲ್ಲಿ ವಾಸವಿರುವ ಬಡ ಮಂದಿಗೆ ನಿವೇಶನ ಕಲ್ಪಿಸಲು ಕ್ರಮ ಕೈಗೊಳ್ಳ ಲಾಗುವುದು. ಈಗಾಗಲೇ ಕರ್ಕಳ್ಳಿ ಯಲ್ಲಿರುವ ಜಾಗದ ಸರ್ವೆ ಕಾರ್ಯಕ್ಕೆ ಮುಂದಾಗಿದ್ದು, ಶಾಸಕರು ಹಾಗೂ ಇತರ ಸದಸ್ಯರ ಸಹಕಾರದೊಂದಿಗೆ ಕಾರ್ಯಯೋಜನೆ ಇದರೊಂದಿಗೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಸ್ತೆ, ಚರಂಡಿಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪಂಚಾಯಿತಿಯ ವಾಣಿಜ್ಯ ಸಂಕೀರ್ಣಗಳನ್ನು ಬಾಡಿಗೆ ಪಡೆದು ಬಾಡಿಗೆ ಬಾಕಿ ಉಳಿಸಿ ಕೊಂಡಿರುವ ವರ್ತಕರ ಮನವೊಲಿಸಿ ಶೇ. ೧೦೦ರಷ್ಟು ತೆರಿಗೆ ಸಂಗ್ರಹಕ್ಕೆ ಪ್ರಯತ್ನಿಸಲಾಗುವುದು. ಸ್ವಚ್ಛತೆಯತ್ತ ಹೆಚ್ಚಿನ ಗಮನ ಹರಿಸಿ ಮಾದರಿ ಪಟ್ಟಣ ಪಂಚಾಯಿತಿಯನ್ನಾಗಿ ಮಾಡಲು ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಹ ಸದಸ್ಯರ ಜೊತೆಗೂಡಿ ಕೆಲಸ ಮಾಡುವುದಾಗಿ ಪಿ.ಕೆ. ಚಂದ್ರು ಅವರು ‘ಶಕ್ತಿ’ಯೊಂದಿಗೆ ಅಭಿಪ್ರಾಯಿಸಿದರು. ಪಂಚಾಯಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭ ಉಪಾಧ್ಯಕ್ಷ ಬಿ.ಸಂಜೀವ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಸದಸ್ಯರುಗಳಾದ ಮೃತ್ಯುಂಜಯ, ಬಿ.ಆರ್. ಜಯಣ್ಣ, ಶುಭಕರ್, ಶೀಲಾ ಡಿಸೋಜ, ಮೋಹಿನಿ, ಮುಖ್ಯಾಧಿಕಾರಿ ನಾಚಪ್ಪ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.