ಮಡಿಕೇರಿ, ಅ. ೧೫: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ಈ ಸಂಬAಧ ಶೀಘ್ರದಲ್ಲಿ ಕ್ರಮವಹಿಸಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು.

ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ಅಳವಡಿಸಿರುವ ೧೩ ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನ ಘಟಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲೆಯ ಜನರು ಮಂಗಳೂರು, ಬೆಂಗಳೂರು, ಮೈಸೂರು ನಗರಗಳನ್ನು

(ಮೊದಲ ಪುಟದಿಂದ) ಅವಲಂಬಿಸಿದ್ದು, ಇಲ್ಲಿಯೇ ಅಗತ್ಯ ಸೌಲಭ್ಯವಿರುವ ಆಸ್ಪತ್ರೆ ಬೇಕಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಬಗ್ಗೆ ಈಗಾಗಲೇ ಸರಕಾರದ ಗಮನ ಸೆಳೆದಿದ್ದೇನೆ. ರೂ. ೩೦೦ ಕೋಟಿಯ ಯೋಜನೆ ಇದಾಗಲಿದ್ದು, ೫ ಎಕರೆ ಜಾಗದ ಅವಶ್ಯಕತೆ ಇದೆ. ಜಾಗ ಗುರುತು ಕಾರ್ಯ ನಡೆಯುತ್ತಿದೆ. ಜಾಗ ನಿಗದಿಯಾದ ಬಳಿಕ ಮುಖ್ಯಮಂತ್ರಿಯನ್ನು ಕರೆಸಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಜಿಲ್ಲಾಸ್ಪತ್ರೆ ಆವರಣದಲ್ಲಿ ಹೆಚ್ಚುವರಿ ಬೆಡ್‌ಗಳ ಆಸ್ಪತ್ರೆ ನಿರ್ಮಾಣ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ೧೩ ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನ ಘಟಕ ಇದೆ. ಇದರೊಂದಿಗೆ ಹೆಚ್ಚುವರಿಯಾಗಿ ಆಕ್ಸಿಜನ್ ಪ್ಲಾಂಟ್ ಅಳವಡಿಸಲಾಗಿದ್ದು, ಇದರಿಂದ ತುರ್ತು ಆಮ್ಲಜನಕ ಲಭ್ಯವಾಗಲಿದೆ ಎಂದರು.

ಈ ಸಂದರ್ಭ ಜಿಲ್ಲಾಸ್ಪತ್ರೆಯ ನಿರ್ದೇಶಕ ಕಳ್ಳಿಚಂಡ ಡಾ. ಕಾರ್ಯಪ್ಪ, ಅಧೀಕ್ಷಕ ಡಾ.ಮಂಜುನಾಥ್, ಆಡಳಿತಾಧಿಕಾರಿ ನಂಜುAಡೇಗೌಡ, ಮುಖ್ಯಸ್ಥರಾದ ಡಾ.ಲೋಕೇಶ್, ಡಾ. ಪ್ರದೀಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.