ಗೋಣಿಕೊಪ್ಪಲು, ಅ. ೧೫: ಸ್ವಚ್ಛತೆಗೆ ಹಾಗೂ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ವೀರಾಜಪೇಟೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮೋಹನ್ ಕುಮಾರ್ ತಿಳಿಸಿದರು. ಮಹಾತ್ಮಾಗಾಂಧಿ ಜಯಂತಿ ಅಂಗವಾಗಿ ಇಲಾಖೆಯ ವತಿಯಿಂದ ವಿವಿಧ ವಸತಿ ನಿಲಯಗಳಲ್ಲಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ನಡೆಸಿದ ಸ್ವಚ್ಛತಾ ಕಾರ್ಯದಲ್ಲಿ ಮಾತನಾಡಿದ ಅವರು ಸ್ವಚ್ಛತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದರಿಂದ ಸುತ್ತಮುತ್ತಲಿನ ಪ್ರದೇಶವು ಉತ್ತಮವಾಗಿರುತ್ತದೆ ಎಂದರು. ಕಾರ್ಯಕ್ರಮದಲ್ಲಿ ನಿಲಯ ಪಾಲಕರೂ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.