ಸೋಮವಾರಪೇಟೆ,ಅ.೧೫: ಇಲ್ಲಿನ ಬ್ರಾಹ್ಮಣ ಸಮಾಜದ ವತಿಯಿಂದ ಶ್ರೀ ಸೋಮೇಶ್ವರ ದೇವಾಲಯದ ಶಕ್ತಿ ಪಾರ್ವತಿ ಸನ್ನಿಧಿಯಲ್ಲಿ ಕಳೆದ ೯ ದಿನಗಳಿಂದ ನಡೆದ ಶರನ್ನವರಾತ್ರಿ ಉತ್ಸವಕ್ಕೆ ವಿಧ್ಯುಕ್ತ ತೆರೆ ಎಳೆಯಲಾಯಿತು.

ದೇವಾಲಯದಲ್ಲಿ ಪ್ರತಿಷ್ಠಾಪಿಸಿದ ಶಕ್ತಿ ಪಾರ್ವತಿ ಉತ್ಸವ ಮೂರ್ತಿಗೆ ಪ್ರತಿದಿನ ವಿಶೇಷ ಅಲಂಕಾರಗಳ ಮೂಲಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗಿದ್ದು, ಉತ್ಸವದ ಕೊನೆಯ ದಿನವಾದ ವಿಜಯದಶಮಿಯಂದು ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ದೇವಿಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ವೀರಗಾಸೆ, ಗೊಂಬೆ ಕುಣಿತ, ಪಟ ಕುಣಿತದೊಂದಿಗೆ ಪಟ್ಟಣದಲ್ಲಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಕೊಂಡೊಯ್ದು ನಂತರ ಇಲ್ಲಿನ ಆನೆಕೆರೆಯಲ್ಲಿ ವಿಸರ್ಜಿಸಲಾಯಿತು.

ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ವಿಜೇತ್, ಪ್ರಮುಖರಾದ ಆನಂದ್, ಶ್ಯಾಂಸುAದರ್, ಸೋಮಶೇಖರ್, ಶ್ರೀಕಾಂತ್ ಮುತ್ತಣ್ಣ, ಎಸ್.ಆರ್. ಸೋಮೇಶ್ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.