ಮಡಿಕೇರಿ, ಅ.೧೫: ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
೨೦೨೧-೨೨ನೇ ಸಾಲಿಗೆ ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ ೧೫ ಕೊನೆಯ ದಿನವಾಗಿದೆ. ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ ೩೦ ಕೊನೆಯ ದಿನವಾಗಿದೆ. ಕೊಡಗು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ ದೂರವಾಣಿ ಸಂಖ್ಯೆ.೦೮೨೭೨-೨೯೫೮೨೯ ಅಥವಾ ಆಯಾಯ ತಾಲೂಕಿನ ತಾಲೂಕು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರ ಮೊಬೈಲ್ ಸಂಖ್ಯೆ ಮಡಿಕೇರಿ-೮೦೭೩೧೯೨೯೧೪, ಸೋಮವಾರಪೇಟೆ-೯೦೦೮೬೮೫೧೨೯ ಮತ್ತು ವೀರಾಜಪೇಟೆ -೯೯೦೦೮೮೩೬೫೪ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.