ಕೂಡಿಗೆ, ಅ. ೧೫: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ವತಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪಾನ್ ಇಂಡಿಯಾ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದಡಿಯಲ್ಲಿ ಕೂಡಿಗೆ ಸದ್ಗುರು ಅಪ್ಪಯ್ಯ ಪ್ರೌಢಶಾಲಾ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಕುಶಾಲನಗರದ ಸಿವಿಲ್ ನ್ಯಾಯಾಧೀಶ ಸಂದೀಪ್ ರೆಡ್ಡಿ ನೆರವೇರಿಸಿದರು. ಕಾನೂನು ಮತ್ತು ಸಂವಿಧಾನದ ಅರಿವು ಪ್ರತಿಯೊಬ್ಬರಿಗೂ ಅತಿ ಅವಶ್ಯಕವಾಗಿರುತ್ತದೆ. ಅವುಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು ಎಂದರು.
ವಕೀಲೆ ಚಂದ್ರಿಕಾ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ಕುರಿತಾದ ವಿಷಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಕೆ. ಅಯಿಷಾ ವಹಿಸಿದ್ದರು. ಸದ್ಗುರು ಅಪ್ಪಯ್ಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಿ. ದುರ್ಗೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಾಲೆಯ ೧೦ನೇ ತರಗತಿ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಮೋಹಿನೇಶ್ವರಿ ಪ್ರಾರ್ಥಿಸಿ, ಎಸ್.ಎಸ್. ಶಿವಪ್ರಸಾದ್ ನಿರೂಪಿಸಿ, ಎ.ಪಿ. ಸೋಮಯ್ಯ ವಂದಿಸಿದರು.