ಮೈಸೂರು ದಸರಾ-ಜಂಬೂ ಸವಾರಿ ಮೆರವಣಿಗೆ

ಮೈಸೂರು, ಅ. ೧೫: ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸರ್ವಾಲಂಕಾರ ಭೂಷಿತನಾಗಿದ್ದ ಕ್ಯಾಪ್ಟನ್ ಅಭಿಮನ್ಯು ೭೫೦ ಕೆ.ಜಿ. ತೂಕದ ಅಂಬಾರಿ ಮತ್ತು ಅದರೊಳಗಿನ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಶಾಂತಚಿತ್ತದಿAದ ಹೆಜ್ಜೆ ಹಾಕಿದ. ಆತನ ಎಡಬಲದಲ್ಲಿ ಕುಮ್ಕಿ ಆನೆಗಳು ಸಾಥ್ ನೀಡಿದವು. ಸಾಂಪ್ರದಾಯಿಕ ಅಲಂಕಾರದಿAದ ಅಂಬಾರಿ ಕಂಗೊಳಿಸುತ್ತಿತ್ತು. ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಬೊಗಸೆಯಲ್ಲಿ ಪುಷ್ಪಗಳನ್ನು ಹಿಡಿದು ಕಣ್ಣುಮುಚ್ಚಿ ಪ್ರಾರ್ಥಿಸಿದರು. ನಂತರ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು. ಹೂಗಳು ತಾಯಿಯ ಮೇಲೆ ಹನಿಮಳೆಗೆರೆದಂತೆ ತಾಕಿದವು. ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಅರಮನೆಗೆ ಇದೇ ಮೊದಲ ಬಾರಿಗೆ ಮೆರವಣಿಗೆ ಮೂಲಕ ಕರೆತರಲಾಯಿತು. ದೇವಸ್ಥಾನದ ಮುಂಭಾಗದಲ್ಲಿ ಅಲಂಕೃತ ವಾಹನದಲ್ಲಿದ್ದ ಉತ್ಸವ ಮೂರ್ತಿಗೆ ಸಚಿವ ಸೋಮಶೇಖರ್ ಅವರು ಪೂಜೆ ಸಲ್ಲಿಸಿದ ಬಳಿಕ ಮಂಗಳವಾದ್ಯದೊAದಿಗೆ ಉತ್ಸವ ಮೂರ್ತಿಯೊಂದಿಗೆ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿದರು. ನಾಡಿನ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಪುಷ್ಪಾರ್ಚನೆ ಮಾಡಿದ ಬಳಿಕ ವೇದಿಕೆಯಲ್ಲಿದ್ದ ಮೈಸೂರು ಒಡೆಯರ್ ಪರಂಪರೆಯ ಯದುವೀರ್ ಒಡೆಯರ್, ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ನಗರದ ಪ್ರಥಮ ಪ್ರಜೆ ಸುನಂದಾ ಫಾಲನೇತ್ರ ಅವರು ಪುಷ್ಪಾರ್ಚನೆ ಮಾಡಿದರು. ಜಿಲ್ಲಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಉಪಸ್ಥಿತರಿದ್ದರು.

ಸಿಂಘು ಗಡಿ ಕೊಲೆಗೂ ರೈತರಿಗೂ ಸಂಬAಧವಿಲ್ಲ

ನವದೆಹಲಿ, ಅ. ೧೫: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಇದೇ ಮೊದಲ ಬಾರಿಗೆ ರೈತ ಪರ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯಿಸಿದೆ. ಸಿಂಘುಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಮುಂದಾಳತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಈ ಕೊಲೆಗೂ ತಮ್ಮ ಸಂಘಟನೆಗೂ ಯಾವುದೇ ರೀತಿಯ ಸಂಬAಧವಿಲ್ಲ. ಕೊಲೆ ಪ್ರಕರಣದಲ್ಲಿ ಕೇಳಿಬರುತ್ತಿರುವ ನಿಹಂಗ್ ಸಿಖ್ ಸಮುದಾಯವಾಗಲೀ ಅಥವಾ ಕೊಲೆಯಾದ ವ್ಯಕ್ತಿಯಾಗಲಿ ತಮ್ಮ ಸಂಘಟನೆಗೆ ಸೇರಿದವರಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸ್ಪಷ್ಟನೆ ನೀಡಿದೆ. ಆ ಮೂಲಕ ಕೊಲೆ ಪ್ರಕರಣದಿಂದ ದೂರು ಉಳಿದಿದೆ ಇದೇ ವೇಳೆ ನಿಹಂಗ್ ಸಿಖ್ ಗುಂಪು ಯಾವುದೇ ರೀತಿಯ ಧಾರ್ಮಿಕ ಪವಿತ್ರತೆಯನ್ನು ದ್ವೇಷಿಸುತ್ತದೆ ಎಂದು ಹೇಳಿದ ಎಸ್‌ಕೆಎಂ, ಆದರೆ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶ ನೀಡಲಾಗುವುದಿಲ್ಲ. ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಈ ಸಂಬAಧ ತಮ್ಮ ಸಂಘಟನೆ ಪೊಲೀಸರಿಗೆ ತನ್ನ ಸಂಪೂರ್ಣ ಬೆಂಬಲವನ್ನು ನೀಡಲಿದೆ ಎಂದು ಹೇಳಿದೆ.

ಮನ್‌ಮೋಹನ್ ಸಿಂಗ್ ಆರೋಗ್ಯ ಸ್ಥಿರ

ನವದೆಹಲಿ, ಅ. ೧೫: ಅನಾರೋಗ್ಯದಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ -ಏಮ್ಸ್ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ. ಮನ್‌ಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಏಮ್ಸ್ಗೆ ದಾಖಲಾಗಿದ್ದ ಡಾ. ಮನಮೋಹನ್ ಸಿಂಗ್ ವೈದ್ಯಕೀಯ ನಿಗಾವಣೆಯಲ್ಲಿದ್ದಾರೆ. ಸುಸ್ತಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ. ಇಂದು ಬೆಳಿಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಆಸ್ಪತ್ರೆಗೆ ಭೇಟಿ ನೀಡಿ, ಡಾ. ಮನ್‌ಮೋಹನ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು. ಡಾ. ಮನ್‌ಮೋಹನ್ ಸಿಂಗ್ ಅವರ ಆರೋಗ್ಯ ನಿನ್ನೆಗಿಂತ ಇಂದು ಉತ್ತಮವಾಗಿರುವುದಾಗಿ ಕಾಂಗ್ರೆಸ್ ವಕ್ತಾರ ಪ್ರಣವ್ ಜಾ ಟ್ವೀಟ್ ಮಾಡಿದ್ದಾರೆ.

ದೇವಾಲಯಗಳ ಹಕ್ಕುಗಳನ್ನು ಭಕ್ತಾದಿಗಳಿಗೆ ನೀಡಿ

ನಾಗ್ಪುರ, ಅ. ೧೫: ದೇಶದಲ್ಲಿ ಕೆಲವು ದೇವಾಲಯಗಳ ಪರಿಸ್ಥಿತಿಯ ಬಗ್ಗೆ ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಆತಂಕ ವ್ಯಕ್ತಪಡಿಸಿದ್ದು, ಅವುಗಳ ನಿರ್ವಹಣೆಯ ಹಕ್ಕನ್ನು ಹಿಂದೂಗಳಿಗೇ ವಹಿಸಬೇಕು ಹಾಗೂ ಆ ದೇವಾಲಯದ ಸಂಪತ್ತನ್ನು ಹಿಂದೂ ಸಮುದಾಯದ ಕಲ್ಯಾಣಕ್ಕಾಗಿ ಬಳಕೆ ಮಾಡಬೇಕೆಂದು ಕರೆ ನೀಡಿದ್ದಾರೆ. ರೇಶಿಮ್ಬಾಘ್‌ನಲ್ಲಿ ಆಯೋಜಿಸಲಾಗಿದ್ದ ವಿಜಯದಶಮಿ ಉತ್ಸವದಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ದಕ್ಷಿಣ ಭಾರತದಲ್ಲಿ ಬಹುತೇಕ ಎಲ್ಲಾ ದೇವಾಲಯಗಳು ಸಂಪೂರ್ಣವಾಗಿ ಸರ್ಕಾರದಿಂದ ನಿರ್ವಹಿಸಲ್ಪಡುತ್ತಿದ್ದು, ದೇಶದ ಉಳಿದ ಭಾಗಗಳಲ್ಲಿ ಕೆಲವು ದೇವಾಲಯಗಳನ್ನು ಸರ್ಕಾರ ನಿರ್ವಹಣೆ ಮಾಡುತ್ತಿದ್ದರೆ, ಇನ್ನೂ ಕೆಲವು ದೇವಾಲಯಗಳನ್ನು ಭಕ್ತಾದಿಗಳೇ ನಿರ್ವಹಣೆ ಮಾಡುತ್ತಿದ್ದಾರೆ. ಮಾತಾ ವೈಷ್ಣೋದೇವಿಯಂತಹ ಸರ್ಕಾರಿ ನಿರ್ವಹಣೆಯಲ್ಲಿರುವ ದೇವಾಲಯವನ್ನು ಉಲ್ಲೇಖಿಸಿರುವ ಮೋಹನ್ ಭಾಗ್ವತ್, ಇಂತಹ ದೇವಾಲಯಗಳಲ್ಲಿ ಪರಿಣಾಮಕಾರಿಯಾದ ನಿರ್ವಹಣೆ ಇದೆ. ಅಂತೆಯೇ ಮಹಾರಾಷ್ಟçದ ಬುಲಂಧಾನ ಜಿಲ್ಲೆಯ ಶೆಗಾಂವ್ ನಲ್ಲಿರುವ ಗಜಾನನ್ ಮಹಾರಾಜ್ ದೇವಾಲಯ, ದೆಹಲಿಯಲ್ಲಿರುವ ಝಂಡೆವಾಲ ದೇವಾಲಯಗಳನ್ನು ಭಕ್ತಾದಿಗಳು ನಿರ್ವಹಿಸುತ್ತಿದ್ದು ಅಲ್ಲಿಯೂ ಪರಿಣಾಮಕಾರಿಯಾದ ನಿರ್ವಹಣೆ ಇದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು, ಅ. ೧೫: ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ಮೂರು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿAದ ತಾ. ೧೭ ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಹೇಳಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ವರದಿ ಹೇಳಿದೆ.

೭ ನೂತನ ರಕ್ಷಣಾ ಕಂಪೆನಿಗಳು ದೇಶಕ್ಕೆ ಅರ್ಪಣೆ

ನವದೆಹಲಿ, ಅ. ೧೫: ವಿಜಯದಶಮಿ ಹಬ್ಬದ ಅಂಗವಾಗಿ ಪ್ರಧಾನಿ ಮೋದಿ ಅವರು ಇಂದು ೭ ನೂತನ ರಕ್ಷಣಾ ಕಂಪೆನಿಗಳನ್ನು ದೇಶಕ್ಕೆ ಅರ್ಪಣೆ ಮಾಡಿದ್ದಾರೆ. ಅದರಂತೆ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಹೊಸ ೭ ರಕ್ಷಣಾ ಸಂಸ್ಥೆಗಳನ್ನ ದೇಶಕ್ಕೆ ಅರ್ಪಿಸಿದ್ದಾರೆ. ಮುನಿಷನ್ ಇಂಡಿಯಾ ಲಿಮಿಟೆಡ್, ಅರ್ಮರ್ಡ್ ವೆಹಿಕಲ್ ನಿಗಮ್ ಲಿಮಿಟೆಡ್, ಅಡ್ವಾನ್ಸ್ ವೆಪನ್ಸ್ ಅಂಡ್ ಇಷ್ಮೆಂಟ್ ಇಂಡಿಯಾ ಲಿಮಿಟೆಡ್, ಗ್ರೂಪ್ ಕಂಫರ್ಟ್ ಲಿಮಿಟೆಡ್, ಯಂತ್ರ ಇಂಡಿಯಾ ಲಿಮಿಟೆಡ್, ಇಂಡಿಯಾ ಆಫೈಲ್ ಲಿಮಿಟೆಡ್, ಗೈಡರ್ ಇಂಡಿಯಾ ಲಿಮಿಟೆಡ್ ಎಂಬ ೭ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ.

ಅಫ್ಘಾನಿಸ್ತಾನಕ್ಕೆ ನೆರವು ನೀಡಲು ನಿರ್ಧಾರ

ರೋಮ್, ಅ. ೧೫: ಸಂಕಷ್ಟ ಎದುರಿಸುತ್ತಿರುವ ಅಫ್ಘಾನಿಸ್ತಾನಕ್ಕೆ ಜಿ-೨೦ ದೇಶಗಳ ನಾಯಕರು ಮಾನವೀಯ ನೆಲೆಯ ನೆರವು ನೀಡಲು ನಿರ್ಧರಿಸಿದ್ದಾರೆ. ನಿನ್ನೆ ನಡೆದ ಜಿ-೨೦ ದೇಶಗಳ ಮುಖ್ಯಸ್ಥರು, ಒಕ್ಕೂಟದ ಪ್ರತಿನಿಧಿಗಳು ಭಾಗವಹಿಸಿದ್ದ ಸಭೆಯಲ್ಲಿ ಅಫ್ಘಾನಿಸ್ತಾನದ ಪುನಶ್ಚೇತನಕ್ಕೆ ಐರೋಪ್ಯ ಒಕ್ಕೂಟ ಸುಮಾರು ೧.೨ ಬಿಲಿಯನ್ ಡಾಲರ್ ನೆರವು ನೀಡಲು ಮುಂದಾಗಿದೆ. ಅಫ್ಘನ್ ನೆರವು ಕಲ್ಪಿಸವಲ್ಲಿ ಜಿ-೨೦ ರಾಷ್ಟçಗಳು ಗುರುತರ ಜವಾಬ್ದಾರಿ ಹೊಂದಿವೆ. ಈ ತುರ್ತು ಪರಿಸ್ಥಿತಿಯಲ್ಲಿ ಅಫ್ಘನ್ ಜನರಿಗೆ ನಾವು ನೆರವಾಗಬೇಕಿದೆ ಎಂದು ಡ್ರಾಗಿ ಹೇಳಿದ್ದಾರೆ.