ಮಡಿಕೇರಿ, ಅ.೧೫: ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ತಾ.೨೨ರಿಂದ ೨೪ರವರೆಗೆ ದಾವಣಗೆರೆಯಲ್ಲಿ ನಡೆಯಲಿದೆ. ಸ್ಪರ್ಧೆಗಳಲ್ಲಿ ಭಾಗವಹಿಸುವ ನೌಕರರಿಗೆ ಸರಕಾರ ಮೂರು ದಿನಗಳ ವಿಶೇಷ ಸಾಂದರ್ಭಿಕ ರಜೆ ನೀಡಿದೆ ಎಂದು ಸರಕಾರಿ ನೌಕರರ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಪೊನ್ನಚನ ಶ್ರೀನಿವಾಸ್ ತಿಳಿಸಿದ್ದಾರೆ.