*ಗೋಣಿಕೊಪ್ಪ, ಅ. ೧೬: ಕಳೆದ ಐದು ವರ್ಷಗಳಿಂದ ಲೋಕೋಪಯೋಗಿ ಇಲಾಖೆಯಲ್ಲಿ ಉತ್ತಮ ಸೇವೆ ನೀಡಿ ವರ್ಗಾವಣೆಗೊಂಡ ಮೂವೇರ ಎಂ. ಸುರೇಶ್ ಅವರನ್ನು ವೀರಾಜಪೇಟೆ ತಾಲೂಕು ಕಾರ್ಯಪಾಲಕ ಇಂಜಿನಿಯರ್ ಕಚೇರಿಯಲ್ಲಿ ಸಹಾಯಕ ಇಂಜಿನಿಯರ್ಗಳು ಹಾಗೂ ಸಿಬ್ಬಂದಿಗಳು, ಗುತ್ತಿಗೆದಾರರು ಸನ್ಮಾನಿಸಿ ಬೀಳ್ಕೊಟ್ಟರು.
ಮೂವೇರ ಎಂ. ಸುರೇಶ್ ಅವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ರಾಗಿ ಕಳೆದ ಐದು ವರ್ಷಗಳಿಂದ ವೀರಾಜಪೇಟೆ ತಾಲೂಕಿನ ಲೋಕೋಪಯೋಗಿ ಇಲಾಖೆ, ನಂ.ಡಿ, ಉಪ-ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸರ್ಕಾರದ ಆದೇಶದಂತೆ ಕಾರ್ಯಪಾಲಕ ಇಂಜಿನಿಯರ್ರಾಗಿ ಪದೋನ್ನತಿ ಪಡೆದು ಕಾವೇರಿ ನೀರಾವರಿ ನಿಗಮ ನಿಯಮಿತ, ರಾಮದುರ್ಗ, ಬೆಳಗಾವಿ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ.
ಇವರನ್ನು ಕೊಡಗು ಜಿಲ್ಲೆ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಡಿ. ನಾಗರಾಜ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳಾದ ಶಿವರಾಮ್, ಮೊಹನ್ಕುಮಾರ್, ಹರ್ಷ, ಕಿರಿಯ ಸಹಾಯಕ ಇಂಜಿನಿಯರ್ ಸಣ್ಣುವಂಡ ನವೀನ್, ಉಪ-ವಿಭಾಗದ ಸಿಬ್ಬಂದಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು.