ಮಡಿಕೇರಿ, ಅ. ೧೬: ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಅಧ್ಯಕ್ಷ ಬಿ.ಆರ್. ನಾಯ್ಡು ಅವರು ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸಾಮಾಜಿಕ ಜಾಲತಾಣದ ಪರಿಶೀಲನಾ ಸಭೆ ನಡೆಸಿ, ಸಾಮಾಜಿಕ ಜಾಲತಾಣದ ಬ್ಲಾಕ್ ಅಧ್ಯಕ್ಷರುಗಳು ಹಾಗೂ ಸಮಿತಿ ಸದಸ್ಯರುಗಳಿಗೆ ನೇಮಕಾತಿ ಆದೇಶ ಪತ್ರ ನೀಡಿದರು.
ಮೈಸೂರು ವಿಭಾಗದ ಪ್ರವಾಸ ದಲ್ಲಿರುವ ನಾಯ್ಡು ಅವರೊಂದಿಗೆ ಮೈಸೂರು ವಿಭಾಗದ ಸಂಚಾಲಕ ಐ.ಜಿ. ಚಿನ್ನಪ್ಪ, ಕೊಡಗು ಜಿಲ್ಲೆ ಸಾಮಾಜಿಕ ಜಾಲತಾಣದ ಉಸ್ತುವಾರಿಗಳಾದ ಅಶೋಕ್ ಶೆಟ್ಟಿ ಹಾಗೂ ಶೀತಲ್ ಅವರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರ್ ವಹಿಸಿದ್ದರು. ಅತಿಥಿಗಳಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ. ರಮೇಶ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ. ಶಾಹಿದ್, ಮೈಸೂರು ವಿಭಾಗದ ಮುಖ್ಯಸ್ಥ ಮುಜಾಹಿದ್, ಮೈಸೂರು ಗ್ರಾಮಾಂತರ ಸಾಮಾಜಿಕ ಜಾಲತಾಣದ ಜಿಲ್ಲಾ ಅಧ್ಯಕ್ಷ ಹೇಮಂತ್‌ಕುಮಾರ್, ಕೊಡಗು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀಸುರಯ್ಯ ಅಬ್ರಾರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎನ್. ಪ್ರಥ್ಯು, ಸೈನಿಕ ಘಟಕದ ಜಿಲ್ಲಾ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು.