ಕೂಡಿಗೆ, ಆ. ೧೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಈ ಭಾಗದ ಅನೇಕ ಗ್ರಾಮಗಳಲ್ಲಿ ಹಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡು ಕೆಲ ಕರುಗಳು ಅಸುನೀಗಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸಂಬAಧಿಸಿದ ಪಶು ಪಶುಪಾಲನಾ ಇಲಾಖೆ ಚಿಕಿತ್ಸೆ ವ್ಯವಸ್ಥೆಯನ್ನು ಮಾಡುವಂತೆ ಗ್ರಾಮಸ್ಥರ ಆಗ್ರಹವಾಗಿದೆ.