ಮಡಿಕೇರಿ, ಅ.೧೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾ. ೨೦ ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಪಡೆ ಸಮಿತಿ ಅಧ್ಯಕ್ಷರಾದ ಶಾಂತೆಯAಡ ರವಿ ಕುಶಾಲಪ್ಪ, ಮುಖ್ಯ ಭಾಷಣಕಾರರಾಗಿ ಎ.ಎನ್. ರವಿ ಅವರು ಪಾಲ್ಗೊಳ್ಳಲಿದ್ದಾರೆ.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಮಿಶ್ರಾ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಕೆ.ಶ್ರೀನಿವಾಸ್ ಇತರರು ಪಾಲ್ಗೊಳ್ಳಲಿದ್ದಾರೆ.