ಮಡಿಕೇರಿ, ಅ.೧೬: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಅರಂತೋಡು ಗ್ರಾಮದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂವರ್ಧನ ಸಮಿತಿ ವತಿಯಿಂದ ಅರೆಭಾಷೆ ಸಂಸ್ಕೃತಿ ಶಿಬಿರವು ತಾ. ೧೮ ರಂದು (ನಾಳೆ) ಬೆಳಗ್ಗೆ ೧೦ ಗಂಟೆಗೆ ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿ ಸೌಧ ಸಭಾಭವನದಲ್ಲಿ ನಡೆಯಲಿದೆ.

ಹಿರಿಯ ಸಂಪನ್ಮೂಲ ವ್ಯಕ್ತಿ ವಾಸುದೇವ ಗೌಡ ಪಾರೆಮಜಲು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ, ಅರಂತೋಡು ಗ್ರಾ.ಪಂ. ಅಧ್ಯಕ್ಷರಾದ ಹರಿಣಿ ದೇರಾಜೆ, ಇತರರು ಪಾಲ್ಗೊಳ್ಳಲಿದ್ದಾರೆ.