ಮಡಿಕೇರಿ, ಅ. ೧೬: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶೇಷಚೇತನರÀ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ/ ಸಲ್ಲಿಸಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್ ೩ ರಂದು ಆಚರಿಸುವ ವಿಶ್ವ ವಿಶೇಷಚೇತನರ ದಿನಾಚರಣೆ ದಿವಸ ವಿಶೇಷಚೇತನರ ರಾಜ್ಯ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆ, ವ್ಯಕ್ತಿ ಮತ್ತು ವಿಶೇಷ ಶಿಕ್ಷಕರಿಗೆ ಪ್ರಶಸ್ತಿಯನ್ನು ನೀಡಲು ವಿಶೇಷಚೇತನರÀ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉದ್ದೇಶಿಸಿದ್ದು, ಕೊಡಗು ಜಿಲ್ಲೆಯಲ್ಲಿ ವಿಶೇಷಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ೧೫ ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ ಸಲ್ಲಿಸಿರುವ ಶಿಕ್ಷಕರು ನಿಗದಿತ ಅರ್ಜಿ ನಮೂನೆಗಳನ್ನು ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‌ಸೈಟ್ ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ನಲ್ಲಿ ಪಡೆದು, ಭರ್ತಿ ಮಾಡಿ ತಾ. ೨೫ ರೊಳಗೆ ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿಗಳ ಕಚೇರಿ ಕೊಡಗು ಜಿಲ್ಲೆ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ. ೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.