ಕುಶಾಲನಗರ, ಅ.೧೬ : ಪ್ರತಿಯೊಬ್ಬರೂ ತಮ್ಮ ಮನೆಯಿಂದಲೇ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯವನ್ನು ಸಂಗ್ರಹಿಸಿ ಸೂಕ್ತವಾಗಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛ ಪರಿಸರ ಸಂರಕ್ಷಣೆಗೆ ಕಟಿಬದ್ಧರಾಗಬೇಕು ಎಂದು ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಡಾ ಪಿ.ಸಿ.ಶ್ರೀನಿವಾಸ್ ಹೇಳಿದರು. ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ ವತಿಯಿಂದ ಕುಶಾಲನಗರ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕ, ಜಿಲ್ಲಾ ರಾಷ್ಟಿçÃಯ ಹಸಿರು ಪಡೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಶಾಲೆಯ ಇಕೋ ಕ್ಲಬ್, ಎನ್.ಎಸ್.ಎಸ್.ನ ಆಶ್ರಯದಲ್ಲಿ ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧದ ಕುರಿತಂತೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಜಾಗೃತಿ ಅಭಿಯಾನದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿದರು.

ದೇಶದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ಗೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಲ್ಲಿ ಮತ್ತು ಅದನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಯಶಸ್ವಿಯಾಗಿದೆ. ಎಲ್ಲರೂ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡಬೇಕು ಎಂದರು.

ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪರಿಸರ ಮಾಲಿನ್ಯಕಾರಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.

ಸರ್ಕಾರವು ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ ಹಾಗೂ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಕ್ರಮಕೈಗೊಂಡಿದೆ ಎಂದು ತಿಳಿಸಿದರು.

ಜಾಗೃತಿ ಅಭಿಯಾನದಲ್ಲಿ ವಿಭಾಗದ ಮುಖ್ಯಸ್ಥರಾದ ಡಾ. ಎಂ.ಶ್ರೀನಿವಾಸಮೂರ್ತಿ, ಡಾ ಚುಡಾ ರತ್ನಾಕರ್, ವಿ.ಜಿ.ವಾಣಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪ್ರಸಾದ್ ಸಾಲ್ಯಾನ್, ಕಂಪ್ಯೂಟರ್ ವಿಭಾಗದ ಶಿಕ್ಷಕ ಜಿ.ಶ್ರೀನಾಥ್, ವಿದ್ಯಾರ್ಥಿಗಳು ಇದ್ದರು. ನಂತರ ನಡೆದ ಜಾಗೃತಿ ಅಭಿಯಾನದಲ್ಲಿ ಎನ್.ಎಸ್.ಎಸ್. ವಿದ್ಯಾರ್ಥಿಗಳು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತ ಭಿತ್ತಿಪತ್ರಗಳನ್ನು ಹಿಡಿದು ಜನಜಾಗೃತಿ ಮೂಡಿಸಿದರು.