ಮಡಿಕೇರಿ, ಅ. ೧೬: ಇತ್ತೀಚೆಗೆ ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಮಹಾಸಭೆಯಲ್ಲಿ ಕೊಡಗು ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷ ಪೊನ್ನಚನ ಶ್ರೀನಿವಾಸ್ ಅವರನ್ನು ಹಾಗೂ ಮೈಸೂರಿನ ಮತ್ತು ವಿಜಯನಗರ ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಷಡಕ್ಷರಿ, ಮಹಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡ ಪಾಟೀಲ್, ರಾಜ್ಯ ಖಜಾಂಚಿ ಶ್ರೀನಿವಾಸ್ ಮತ್ತು ಇತರ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.