ಮಡಿಕೇರಿ, ಅ. ೧೬: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಮೈಸೂರು ಕೊಡವ ಸಮಾಜ ಇವರ ಸಹಯೋಗದಲ್ಲಿ ತಾ. ೨೦ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೈಸೂರಿನ ಕೊಡವ ಸಮಾಜದಲ್ಲಿ “ಕೊಡವ ಭಾಷೆ ಮತ್ತು ಎಂಟನೇ ಪರಿಚ್ಛೇದ ಹಾಗೂ ಪುಸ್ತಕ ಬಿಡುಗಡೆ” ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವ ವಿ. ಸುನಿಲ್ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ. ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ. ಬೋಪಯ್ಯ, ಮಂಡೇಪAಡ ಅಪ್ಪಚ್ಚು ರಂಜನ್, ಶಾಂತೆಯAಡ ವೀಣಾ ಅಚ್ಚಯ್ಯ, ಪಶ್ವಿಮಘಟ್ಟ ಅರಣ್ಯ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಮೈಸೂರು ಶಾಸ್ತಿçÃಯ ಕನ್ನಡ ಅಧ್ಯಯನ ಕೇಂದ್ರದಲ್ಲಿರುವ ಡಾ. ಆರ್. ಚಲಪತಿ ಹಾಗೂ ಮೈಸೂರು ಕೊಡವ ಸಮಾಜದ ಅಧ್ಯಕ್ಷ ಕೇಕಡ ಬೆಳ್ಯಪ್ಪ ಭಾಗವಹಿಸಲಿದ್ದಾರೆ.
ವೀರಾಜಪೇಟೆ ಪೂಮಾಲೆ ವಾರಪತ್ರಿಕೆಯ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ ಇವರು “೮ನೇ ಪರಿಚ್ಛೇದ ಪಿಂಞ ಕೊಡವ ತಕ್ಕ್” ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸಲಿದ್ದಾರೆ. ಹಾಗೂ ಈ ಕಾರ್ಯಕ್ರಮದ ಜೊತೆಗೆ ಐತಿಚಂಡ ರಮೇಶ್ ಉತ್ತಪ್ಪ ಅವರು ಬರೆದಿರುವ- ಮೀದಿಬೆಪ್ಪೊ, ಮೊಣ್ಣಂಡ ಶೋಭಾ ಸುಬ್ಬಯ್ಯ ಅವರು ಬರೆದಿರುವ-ನಲ್ಲಾಮೆ, ಚೊಟ್ಟೆಯಾಂಡಮಾಡ ಲಲಿತ ಕಾರ್ಯಪ್ಪ ಅವರು ಬರೆದಿರುವ-ಪೊನ್ನ್ರಂತ ತಕ್ಕ್ ಮತ್ತು ಬಾಚಮ್ಮಂಡ ಗೌರಮ್ಮ ಮಾದಮ್ಮಯ್ಯ ಅವರು ಬರೆದಿರುವ-ಸಂಪೂರ್ಣ ಮಹಾಭಾರತ ಚೋದ್ ಚೋದ್ಯ ಎಂಬ ಪುಸ್ತಕಗಳ ಬಿಡುಗಡೆ ಸಮಾರಂಭ ನಡೆಯಲಿದೆ. ಅಕಾಡೆಮಿ ಪ್ರಕಟಿತ ಪುಸ್ತಕಗಳು ಹಾಗೂ ಸಿ.ಡಿ.ಗಳ ಮಾರಾಟ ಮತ್ತು ಪ್ರದರ್ಶನ ಇರುತ್ತದೆ ಎಂದು ಅಕಾಡೆಮಿ ಅಧ್ಯಕೆÀ್ಷ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.