ಕೂಡಿಗೆ, ಅ. ೧೮: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಪಟ್ಟಣ ಪಂಚಾಯಿತಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯಿತಿ, ಕೂಡು ಮಂಗಳೂರು ಗ್ರಾಮ ಪಂಚಾಯಿತಿ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪಾನ್ ಇಂಡಿಯಾ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಅಡಿಯಲ್ಲಿ ಕೂಡುಮಂಗಳೂರು ಗ್ರಾಮದಲ್ಲಿರುವ ಕಾರ್ಪೋರೇಶನ್ ಬ್ಯಾಂಕ್ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಉದ್ಘಾಟನೆಯನ್ನು ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ನೆರವೇರಿಸಿದರು. ಕಾನೂನು ಮತ್ತು ಸಂವಿಧಾನದ ಅರಿವು ಪ್ರತಿಯೊಬ್ಬ ರಿಗೂ ಅವಶ್ಯಕವಾಗಿರುತ್ತದೆ. ಅವುಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು ಎಂದರು.

ವಕೀಲ ಕೆ.ಬಿ. ಮೋಹನ್ ಮಾನವ ಹಕ್ಕುಗಳು ಕುರಿತಾದ ವಿಷಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ತರಬೇತಿ ಕೇಂದ್ರದ ನಿರ್ದೇಶಕ ಕೆ. ಪ್ರಕಾಶ್ ಕುಮಾರ್ ಮಾತನಾಡಿದರು. ವೇದಿಕೆಯಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಪೊಲೀಸ್ ಪೇದೆ ಜಗದೀಶ್, ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು, ಚಿಕ್ಕತ್ತೂರು, ದೊಡ್ಡತ್ತೂರು, ಹಾರಂಗಿ, ಕೂಡು ಮಂಗಳೂರು ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.