ತಾ. ೨೫ ರಿಂದ ೧ ರಿಂದ ೫ನೇ ತರಗತಿ ಆರಂಭ
ಬೆAಗಳೂರು, ಅ. ೧೮: ಕೊರೊನಾ ಮಹಾಮಾರಿಯಿಂದ ಮುಚ್ಚಲಾಗಿದ್ದ ಶಾಲೆಗಳ ಆರಂಭ ಕ್ರಮವಾಗಿ ನಡೆಯುತ್ತಿದ್ದು ಇದೀಗ ತಾ. ೨೫ ರಿಂದ ೧ ರಿಂದ ೫ನೇ ತರಗತಿಗಳು ಆರಂಭ ಆಗಲಿವೆೆ. ರಾಜ್ಯದಲ್ಲಿ ಕೊರೊನಾ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ್ದರಿಂದ ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಇನ್ನು ಶಾಲೆಗಳ ಆರಂಭ ಕುರಿತಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯ. ಮಕ್ಕಳಿಗೆ ಶಾಲೆ ಹಾಜರಾತಿ ಕಡ್ಡಾಯವಿಲ್ಲ. ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ೨ ಡೋಸ್ ಲಸಿಕೆ ಪಡೆದಿರಬೇಕು. ಸದ್ಯಕ್ಕೆ ತರಗತಿಯಲ್ಲಿ ಶೇ. ೫೦ ರಷ್ಟು ಮಕ್ಕಳಿಗೆ ಮಾತ್ರ ಅವಕಾಶ. ತರಗತಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ೫೦ ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್ಶೀಲ್ಡ್ ಕಡ್ಡಾಯ. ಅರ್ಧ ದಿನ ಮಾತ್ರ ತರಗತಿ ನಡೆಸಲಾಗುತ್ತದೆ.
ಹಿಂಸಾಚಾರದ ವಿರುದ್ಧ ‘ರೈಲ್ ರೋಖೋ’ ಪ್ರತಿಭಟನೆ
ನವದೆಹಲಿ, ಅ. ೧೮: ಈಗಾಗಲೇ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ ಲಖೀಂಪುರ್ ಖೇರಿ ಹಿಂಸಾಚಾರದ ವಿರುದ್ಧ 'ರೈಲ್ ರೋಖೋ' ಪ್ರತಿಭಟನೆ ನಡೆಸಿದರು. ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ರೈತ ಸಂಘಟನೆಯು ದೇಶಾದ್ಯಂತ ೬ ಗಂಟೆಗಳ ಕಾಲ ರೈಲ್ ರೋಖೋ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ ಪಂಜಾಬ್ ಮತ್ತು ಹರಿಯಾಣದ ಎಲ್ಲಾ ರೈಲ್ವೆ ಹಳಿಗಳ ಮೇಲೆ ರೈತರು ಕುಳಿತು ಧರಣಿ ನಡೆಸಿದರು, ಪರಿಣಾಮ ಎಲ್ಲಾ ಮಾರ್ಗಗಳಲ್ಲಿ ರೈಲು ಸಂಚಾರ ಸ್ಥಗಿತವಾಗಿದ್ದು, ಪ್ರಯಾಣಿಕರು ಪರದಾಡುವಂತಾಯಿತು. ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ ಆಶಿಶ್ ಮಿಶ್ರಾ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರನಾಗಿರುವ ಕಾರಣ ಅಜಯ್ ಮಿಶ್ರಾರನ್ನು ಕೇಂದ್ರ ಸಚಿವ ಸಂಪುಟದಿAದ ತೆಗೆದುಹಾಕಬೇಕೆಂಬ ಬೇಡಿಕೆಯನ್ನು ಬೆಂಬಲಿಸಿ ರೈತರು ಪ್ರತಿಭಟನೆ ನಡೆಸಿದರು.
ಮೈಶುಗರ್-ಸರ್ಕಾರದಿಂದಲೇ ನಿರ್ವಹಣೆಗೆ ತೀರ್ಮಾನ
ಬೆಂಗಳೂರು, ಅ. ೧೮: ನಷ್ಟದಲ್ಲಿರುವ ಮೈಸೂರಿನ ಮೈಶುಗರ್ ಕಾರ್ಖಾನೆಯನ್ನು ೨೦೨೨ರ ಹಂಗಾಮಿನಿAದ ಎರಡು ವರ್ಷಗಳ ಕಾಲ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿಧಾನಸೌಧದಲ್ಲಿ ಸೋಮವಾರ ಮಂಡ್ಯದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ನಿಯೋಗದ ಜೊತೆ ನಡೆಸಿದ ಸಭೆಯಲ್ಲಿ ಎರಡು ವರ್ಷಗಳ ಕಾಲ ಮೈಶುಗರ್ ಕಾರ್ಖಾನೆಯನ್ನು ಸರ್ಕಾರ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು. ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಮೂರು ತಿಂಗಳಲ್ಲಿ ಮೈಶುಗರ್ ಪುನಶ್ಚೇತನದ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಕಬ್ಬಿನ ಉಪ ಉತ್ಪನ್ನಗಳನ್ನು ತಯಾರಿಸಲು ಆದ್ಯತೆ ನೀಡಲಾಗುತ್ತದೆ. ಕೂಡಲೆ ದಕ್ಷ ಅಧಿಕಾರಿಯನ್ನು ಎಂಡಿಯಾಗಿ ನೇಮಕ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಸರಿಪಡಿಸಲು ಈಗಿನಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದರು. ಮೈಶುಗರ್ ಖಾಸಗಿಕರಣ ಮಾಡುವ ಪ್ರಸ್ತಾಪ ಸದ್ಯಕ್ಕೆ ವಾಪಸ್ ಪಡೆಯುತ್ತೇವೆ. ಅಷ್ಟೇ ಅಲ್ಲದೆ ಕಾರ್ಖಾನೆಗೆ ಅಗತ್ಯ ಹಣಕಾಸು ನೆರವು ನೀಡಲಾಗುವುದು ಎಂದು ತಿಳಿಸಿದರು.
ಕೇರಳದಲ್ಲಿ ಮುಂದುವರಿದ ವರುಣನ ಆರ್ಭಟ
ತಿರುವನಂತಪುರA, ಅ. ೧೮: ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯಾದ್ಯಂತ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನೀರಿನ ಮಟ್ಟದ ಮೇಲ್ವಿಚಾರಣೆ ಮಾಡುವಂತೆ ಮತ್ತು ಅಗತ್ಯವಿದ್ದಲ್ಲಿ ಅಣೆಕಟ್ಟು ಗೇಟ್ಗಳನ್ನು ತೆರೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ತಜ್ಞರ ಸಮಿತಿಗೆ ಸೂಚಿಸಿದ್ದಾರೆ. ಮಳೆ ಸಂಬAಧಿತ ಅನಾಹುತಗಳ ಬಗ್ಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ ಮುಖ್ಯಮಂತ್ರಿಗಳು, ಅಣೆಕಟ್ಟು ಗೇಟ್ಗಳನ್ನು ತೆರೆಯುವ ಬಗ್ಗೆ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಜ್ಞರ ಸಮಿತಿಗೆ ನಿರ್ದೇಶನ ನೀಡಿದರು. ಅಣೆಕಟ್ಟಿನ ಗೇಟ್ಗಳನ್ನು ತೆರೆಯುವುದರಿಂದ ಕುಟ್ಟನಾಡಿನಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆಯಿರುವುದರಿಂದ ರಾಷ್ಟಿçÃಯ ವಿಪತ್ತು ನಿರ್ವಹಣಾ ಪಡೆಯನ್ನು ಆಲಪ್ಪುಳಕ್ಕೆ ಕಳುಹಿಸಲಾಗಿದೆ. ರಾಜ್ಯದಾದ್ಯಂತ ೧೮೪ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಜನರನ್ನು ಅಲ್ಲಿಗೆ ಸ್ಥಳಾಂತರಿಸಲು ಎಲ್ಲ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ದುಷ್ಕರ್ಮಿಗಳಿಂದ ವಕೀಲನ ಹತ್ಯೆ
ಶಹಜಾನ್ಪುರ, ಅ. ೧೮: ಭೂಪೇಂದ್ರ ಪ್ರತಾಪ್ ಸಿಂಗ್ ಎಂಬ ವಕೀಲರನ್ನು ನ್ಯಾಯಾಲಯದ ಮೂರನೇ ಮಹಡಿಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಾನ್ಪುರದಲ್ಲಿ ನಡೆದಿದೆ. ಶಹಜಾನ್ಪುರ ಸಿವಿಲ್ ಕೋರ್ಟ್ನ ಮೂರನೇ ಮಹಡಿಯಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಸದರ್ ಪೊಲೀಸರು ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡವನ್ನು ರಚನೆ ಮಾಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಲಾಲಾಬಾದ್ ತಹಸಿಲ್ನ ವಕೀಲ ಭೂಪೇಂದ್ರ ಸಿಂಗ್ (೩೮) ಅವರು ಜಿಲ್ಲಾ ನ್ಯಾಯಾಲಯದ ಎಸಿಜೆಎಂ -೧ರ ಮೂರನೇ ಮಹಡಿಯ ಕಚೇರಿಯಲ್ಲಿ ಗುಮಾಸ್ತರನ್ನು ಭೇಟಿ ಮಾಡಲು ಬಂದಾಗ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್. ಆನಂದ್ ಅವರು ಹೇಳಿದ್ದಾರೆ.
ದಸರಾ ಬಳಿಕ ಮೈಸೂರಿನಲ್ಲಿ ಪಾಸಿಟಿವಿಟಿ ದರ ಏರಿಕೆ
ಬೆಂಗಳೂರು, ಅ. ೧೮: ದಸರಾ ಹಬ್ಬ ಸಂಭ್ರದ ಬಳಿಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾಮಾರಿ ಕೊರೊನಾ ಸಾಂಕ್ರಾಮಿಕ ರೋಗದ ಅಬ್ಬರ ಕೊಂಚ ಪ್ರಮಾಣದಲ್ಲಿ ಏರಿಕೆಯಾಗಿರುವುದು ಕಂಡು ಬಂದಿದೆ. ತಾ. ೧೪ ರಂದು, ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿಯೂ ಶೇ. ೧ ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳು ವರದಿಯಾಗಿತ್ತು. ಆದರೆ, ತಾ. ೧೬ರ ಬಳಿಕ ಮೈಸೂರು ಜಿಲ್ಲೆಯಲ್ಲಿ ಶೇ. ೧.೧೩ ರಷ್ಟು ಪಾಸಿಟಿವಿಟಿ ದರ ದಾಖಲಾಗಿರುವುದು ಕಂಡು ಬಂದಿದೆ. ಮೈಸೂರಿನಲ್ಲಿ ಕಂಡು ಬರುತ್ತಿರುವ ಈ ಬೆಳವಣಿಗೆ ಅಧಿಕಾರಿಗಳಲ್ಲಿ ಆಶ್ಚರ್ಯವನ್ನುಂಟು ಮಾಡಿಲ್ಲ. ಜಿಲ್ಲೆಯಲ್ಲಿ ೧೦ ದಿನಗಳ ಕಾಲ ದಸರಾ ಉತ್ಸವಗಳನ್ನು ನಡೆಸಿದ ಪರಿಣಾಮ ಪಾಸಿಟಿವಿಟಿ ದರ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಸರಾ ಹಿನ್ನೆಲೆಯಲ್ಲಿ ದೇಶ ಹಾಗೂ ವಿದೇಶಗಳಿಂದ ಮೈಸೂರಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಕಳೆದ ಏಳು ದಿನಗಳ ದತ್ತಾಂಶಗಳ ಪ್ರಕಾರ, ಮೈಸೂರು ಜಿಲ್ಲೆಯಲ್ಲಿ ಅಕ್ಟೋಬರ್ ೧೪ ರಂದು ಶೇ. ೦.೮೨ ರಷ್ಟು ಪಾಸಿಟಿವಿಟಿ ದರ ದಾಖಲಾಗಿತ್ತು. ಆದರೆ, ನಂತರ ಎರಡು ದಿನಗಳಲ್ಲಿ ಪಾಸಿಟಿವಿಟಿ ದರ ಶೇ. ೧.೧೩ಕ್ಕೆ ತಲುಪಿದೆ.
ಅನಿರ್ದಿಷ್ಟಾವಧಿ ಮುಷ್ಕರ-ಲಾರಿ ಮಾಲೀಕರ ಎಚ್ಚರಿಕೆ
ಬೆಂಗಳೂರು, ಅ. ೧೮: ಡೀಸೆಲ್ ಮೇಲೆ ವಿಧಿಸಿರುವ ವ್ಯಾಟ್ ಅನ್ನು ರಾಜ್ಯ ಸರ್ಕಾರ ಕಡಿಮೆ ಮಾಡಬೇಕು ಇಲ್ಲವಾದಲ್ಲಿ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಬೇಕಾಗುತ್ತದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಡೀಸೆಲ್ ಬೆಲೆ ಸತತವಾಗಿ ಏರಿಕೆಯಾಗುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ
ಶಂಕರ್ ರಾವ್ ಇನ್ನಿಲ್ಲ
ಬೆಂಗಳೂರು, ಅ. ೧೮: ಕನ್ನಡ ಚಿತ್ರರಂಗ ಹಾಗೂ ಕಿರಿತೆರೆಯ ಹಿರಿಯ ಕಲಾವಿದ ಶಂಕರ್ ರಾವ್ ಇಂದು ವಿಧಿವಶರಾಗಿದ್ದಾರೆ. ಸೋಮವಾರ ಬೆಳಿಗಿನ ಜಾವ ಮೃತಪಟ್ಟಿರುವ ಶಂಕರ್ ರಾವ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರು ನೂರಾರೂ ಚಿತ್ರಗಳಲ್ಲಿ ಅಭಿನಯಿಸಿದ್ದು, ಸಿಲ್ಲಿಲಲ್ಲಿ ಹಾಗೂ ಪಾಪಾ ಪಾಂಡು ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು. ಇವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.