ಕೂಡಿಗೆ, ಅ. ೧೮: ಯಾರೊಬ್ಬ ವ್ಯಕ್ತಿ ತನ್ನ ಕರ್ತವ್ಯವನ್ನು ಚಾಚೂ ತಪ್ಪದೇ ಪರಿಶ್ರಮ ಮೂಲಕ ಕಾರ್ಯಪಾಲನೆ ಮಾಡಿದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಅಲ್ಲದೆ ಭವಿಷ್ಯದಲ್ಲಿ ಪ್ರಗತಿ ಹೊಂದಬಹುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಕೂಡಿಗೆಯ ಕೊಡಗು ಸೈನಿಕ ಶಾಲೆಯ ೧೫ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಕಾರ್ಯ ಕ್ಷೇತ್ರಗಳಲ್ಲಿ ಸೃಜನಶೀಲತೆ, ನಾವಿನ್ಯತೆ ಮತ್ತು ಆವಿಷ್ಕಾರವನ್ನು ಮೈಗೂಡಿಸಿಕೊಳ್ಳಬೇಕು. ಅಲ್ಲದೆ ಸೈನಿಕ ಶಾಲೆಯು ಪ್ರಾರಂಭದಿAದ ಇಂದಿನವರೆಗೂ ಪ್ರಗತಿಯನ್ನು ಹೊಂದಲು ಸೈನಿಕ ಶಾಲೆಯ ಆಡಳಿತ ಮಂಡಳಿ ಮತ್ತು ಎಲ್ಲಾ ಶಿಕ್ಷಕರ ಸಿಬ್ಬಂದಿ ವರ್ಗದವರ ಪರಿಶ್ರಮದಿಂದಾಗಿ ಶಾಲೆಯು ಅಂರ್ರಾಷ್ಟಿçÃಯ ಮಟ್ಟದ ಸೌಲಭ್ಯಗಳನ್ನು ಹೊಂದಲು ಸಾಧ್ಯವಾಗಿದೆ. ಇದರ ಮೌಲ್ಯ ಮತ್ತು ಸಿದ್ಧಾಂತ, ಸಮಯ ಪ್ರಜ್ಞೆಯನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
ಶಾಸಕ ಎಂಪಿ. ಅಪ್ಪಚ್ಚು ರಂಜನ್ ಶಾಲಾ ಅವರಣದಲ್ಲಿರುವ ಯುದ್ಧ ವೀರರ ಸ್ಮಾರಕಕ್ಕೆ ತೆರಳಿ ಪುಷ್ಪಗುಚ್ಛವನ್ನು ಅರ್ಪಿಸುವುದರ ಮೂಲಕ ಗೌರವವನ್ನು ಸಲ್ಲಿಸಿದರು.
ನಂತರ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ಅಯೋಜಿಸಿದ ೧೫ ವರ್ಷದ ಶಾಲಾ ಅಭಿವೃದ್ಧಿಯ ಪಥದ ಅಂದು- ಇಂದು ಶೀರ್ಷಿಕೆಯ ವಿವಿಧ ಛಾಯಾಚಿತ್ರಗಳನ್ನು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಆಗಿ ಮುಖ್ಯ ಕಾರ್ಯ ನಿರ್ವಹಿಸಿದ ವಿವಿಧ ಇಲಾಖೆಯವರನ್ನು ಗೌರವಿಸಿ ನೆನಪಿ ಕಾಣಿಕೆಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಜಿ. ಕಣ್ಣನ್, ಉಪ ಪ್ರಾಂಶುಪಾಲೆ ಲೆಫ್ಟಿನೆಂಟ್ ಕರ್ನಲ್ ಸೀಮಾ ತ್ರಿಪಾಠಿ, ಆಡಳಿತಾಧಿಕಾರಿಗಳಾದ ಸ್ಕಾ÷್ವಡ್ರನ್ ಲೀಡರ್ ಆರ್.ಕೆ. ಡೇ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.