ಮಡಿಕೇರಿ, ಅ. ೧೮: ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಿ.ಸಿ. ಸತೀಶ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.
ನಗರದ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಅಧಿಕಾರ ವಹಿಸಿಕೊಂಡರು. ಡಾ. ಬಿ.ಸಿ. ಸತೀಶ ಅವರು ಈ ಹಿಂದೆ ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ, ಧಾರವಾಡ ಜಿಲ್ಲೆಯ ಜಿಲ್ಲಾ ಪಂಚಾಯಿತಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾಗಿ, ಬೆಳಗಾವಿ, ಬೈಲಹೊಂಗಲ, ಕುಮುಟಾದಲ್ಲಿ ಉಪ ವಿಭಾಗಾಧಿಕಾರಿ ಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶೀಲ್ದಾರರಾದ ಪಿ.ಎಸ್. ಮಹೇಶ್, ಪ್ರಕಾಶ್ ಇತರರು ಈ ಸಂದರ್ಭ ಇದ್ದರು.