ಕುಶಾಲನಗರ, ಅ.೧೮: ಕೊಡಗು ಜಿಲ್ಲೆಯಲ್ಲಿ ಮತಾಂತರ ಪ್ರಚೋದಿಸುತ್ತಿರುವ ವ್ಯಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಧಿಕಾರಿಗಳಿಗೆ ಹೇಳಿದರು.

ಜಿಲ್ಲೆಯ ದಿಡ್ಡಳ್ಳಿ, ಶನಿವಾರಸಂತೆ, ಪೊನ್ನಂಪೇಟೆಯ ಮುತ್ತೂರು ಮತ್ತಿತರ ಪ್ರದೇಶಗಳಲ್ಲಿ ಮತಾಂತರ ಅವ್ಯಾಹತವಾಗಿ ನಡೆಯುತ್ತಿದ್ದು, ಇದರ ಹಿಂದೆ ಇರುವ ಜಾಲವನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಶಾಸಕ ರಂಜನ್ ಒತ್ತಾಯಿಸಿದರು.

ಅವರು ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಕೆಲವೆಡೆ ವಾಹನಗಳಲ್ಲಿ ಸಂಚರಿಸಿ ಕೆಲವರು ಗ್ರಾಮೀಣ ಪ್ರದೇಶಗಳಲ್ಲಿ ಬಡ ಜನರನ್ನು ಪ್ರಚೋದಿಸಿ ಮತಾಂತರಕ್ಕೆ ಒಳಪಡಿಸುತ್ತಿರುವ ಬಗ್ಗೆ ಮಾಹಿತಿಗಳು ಹೊರ ಬೀಳುತ್ತಿವೆ. ಮತಾಂತರಕ್ಕೆ ಸಂಬAಧಿಸಿದAತೆ ಪ್ರಚಾರ ನೀಡುವ ಭಿತ್ತಿಪತ್ರಗಳು ಈ ನಡುವೆ ಅಲ್ಲಲ್ಲಿ ಕಾಣುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ತಕ್ಷಣ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವ್ಯವಸ್ಥೆ ಮತಾಂತರಕ್ಕೆ ಸಂಬAಧಿಸಿದ ವ್ಯಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ .