ಕೂಡಿಗೆ, ಅ. ೧೮: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೦-೨೧ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಗ್ರಾ.ಪಂ. ಅಧ್ಯಕ್ಷ ಚೆಲುವರಾಜ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜೇಶ್ ೧೫ನೇ ಹಣಕಾಸು ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. ಅಧ್ಯಕ್ಷ ಚೆಲುವರಾಜ್ ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.

ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯಡಿ ಯಲ್ಲಿ ಕೈಗೊಂಡ ಕಾಮಗಾರಿಗಳ ವಿವರಗಳನ್ನು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಮೇಶ್ ನೀಡಿದರು.

ಸಭೆಯಲ್ಲಿ ನೋಡಲ್ ಅಧಿಕಾರಿ ಯಾಗಿ ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಯಾದವ್ ಬಾಬು, ಗ್ರಾ.ಪಂ. ಉಪಾಧ್ಯಕ್ಷೆ ಜಯಮ್ಮ ಸೇರಿದಂತೆ ಸದಸ್ಯರು ಹಾಗೂ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತಿತರರಿದ್ದರು. ಕಾರ್ಯದರ್ಶಿ ಬಲರಾಮೇಗೌಡ ಸ್ವಾಗತಿಸಿ, ವಂದಿಸಿದರು.