ಮಡಿಕೇರಿ, ಅ. ೧೮: ಮೈಸೂರಿನ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ ಮತ್ತು ಗ್ರಾಮಾಂತರ ಬುದ್ಧಿ ಜೀವಿಗಳ ಬಳಗದ ವತಿಯಿಂದ ಜ್ಞಾನ ಪೀಠ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರ ೧೨೦ನೇ ಜನ್ಮ ದಿನದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಜಿಲ್ಲೆಯ ಲೇಖಕಿಯರಾದ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಹಾಗೂ ಸಹನಾ ಕಾಂತಬೈಲು ಅವರುಗಳು ಡಾ.ಶಿವರಾಮ ಕಾರಂತ ಕಥಾ ಪುರಸ್ಕಾರ ಪ್ರಶಸ್ತಿ ಪಡೆದುಕೊಂಡಿದ್ದಾರೆ.