ಸೋಮವಾರಪೇಟೆ,ಅ.೧೮: ಇಲ್ಲಿನ ವಿರಕ್ತ ಮಠಾಧೀಶರಾಗಿದ್ದ ಶ್ರೀ ವಿಶ್ವೇಶ್ವರ ಸ್ವಾಮೀಜಿಗಳ ೨ನೇ ವರ್ಷದ ಸಂಸ್ಮರಣೋತ್ಸವ ಕಾರ್ಯಕ್ರಮ ಸ್ವಾಮೀಜಿಗಳ ಗದ್ದುಗೆಯಲ್ಲಿ ನೆರವೇರಿತು.
ವೀರಶೈವ ಸಮಾಜ ಹಾಗೂ ಮಠದ ಭಕ್ತಾದಿಗಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಸ್ವಾಮೀಜಿಗಳ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳನ್ನು ಸ್ಮರಿಸಲಾಯಿತು.
ಈ ಸಂದರ್ಭ ವೀರಶೈವ ಸಮಾಜದ ಯಜಮಾನ ಬಿ.ಪಿ. ಶಿವಕುಮಾರ್, ಶೆಟ್ರು ಬಿ.ಆರ್. ಮೃತ್ಯುಂಜಯ, ಕಾರ್ಯದರ್ಶಿ ನಾಗರಾಜ್, ಅಕ್ಕನ ಬಳಗದ ಅಧ್ಯಕ್ಷೆ ಜಲಜಾ ಶೇಖರ್, ಸಮಾಜದ ಪ್ರಮುಖರಾದ ಸಚಿನ್, ಗೀತಾ ರಾಜು, ಮಿಥುನ್ ಶಾಸ್ತಿç, ಮಂಜುನಾಥ್, ಗುರುಪ್ರಸಾದ್, ಜೆ.ಸಿ. ಶೇಖರ್ ಸೇರಿದಂತೆ ಇತರರು ಭಾಗವಹಿಸಿದ್ದರು.