ಸೋಮವಾರಪೇಟೆ,ಅ.೧೮: ಇಲ್ಲಿನ ತಾಲೂಕು ಕಚೇರಿಯಲ್ಲಿರುವ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿದ್ದು, ಸಾರ್ವಜನಿಕ ಕೆಲಸಕಾರ್ಯಗಳಿಗೆ ತೊಂದರೆ ಯಾಗುತ್ತಿದೆ. ಈ ಹಿನ್ನೆಲೆ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ವಹಿಸಬೇಕೆಂದು ಕಾಫಿ ಬೆಳೆಗಾರರ ಹೋರಾಟ ಸಮಿತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಕಂದಾಯ ಇಲಾಖೆಯಲ್ಲಿ ೧೪ ಸಿಬ್ಬಂದಿಗಳ ಕೊರತೆಯಿದ್ದು, ಸರ್ವೆ ಇಲಾಖೆಯಲ್ಲಿ ಓರ್ವರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ಬೆಳೆಗಾರರು ಹಾಗೂ ರೈತರ ಯಾವುದೇ ಕೆಲಸಕಾರ್ಯಗಳು ನಿಗದಿತ ಸಮಯಕ್ಕೆ ಆಗುತ್ತಿಲ್ಲ. ಈ ಹಿನ್ನೆಲೆ ಸರ್ಕಾರದ ಗಮನ ಸೆಳೆದು ಸಿಬ್ಬಂದಿಗಳ ನಿಯೋಜನೆಗೆ ಕ್ರಮಕೈಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಎಂ.ಸಿ. ಮುದ್ದಪ್ಪ, ಕಾರ್ಯದರ್ಶಿ ಬಿ.ಎಸ್. ಸುದೀಪ್ ಸೇರಿದಂತೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.