ರಾಜ್ಯದಲ್ಲಿ ಕೊರೊನಾ ಏರಿಕೆ: ೯ ಸಾವು!
ಬೆಂಗಳೂರು, ಅ. ೨೦: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ ೨೪ ಗಂಟೆಯಲ್ಲಿ ೪೬೨ ಕೊರೊನಾ ಪ್ರಕರಣಗಳು ವರದಿಯಾಗಿವೆೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೨೯,೮೪,೪೮೪ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ೯ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೭,೯೭೬ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು ೨೫೩ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೨,೪೯,೯೧೫ಕ್ಕೆ ಏರಿಕೆಯಾಗಿದೆ. ನಗರದಲ್ಲಿ ೬ ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ೪೭೯ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೨೯,೩೭,೪೦೫ಕ್ಕೆ ಏರಿಕೆಯಾಗಿದೆ. ೯,೦೭೪ ಸಕ್ರಿಯ ಪ್ರಕರಣಗಳಿವೆ. ರಾಜ್ಯಾದ್ಯಂತ ೧,೧೬,೧೨೧ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ೪೬೨ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. ೦.೩೯ಕ್ಕೆ ಇಳಿದಿದೆ.
ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್‌ಗೆ ಇಬ್ಬರು ಉಗ್ರರು ಬಲಿ
ಶೋಪಿಯಾನ್, ಅ. ೨೦: ಉತ್ತರ ಪ್ರದೇಶದ ಸಹರನ್ಪುರ್‌ನಿಂದ ಕಾಶ್ಮೀರಕ್ಕೆ ವಲಸೆ ಬಂದಿದ್ದ ಬಡಗಿಯ ಹತ್ಯೆ ಮಾಡಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ತಾ.೨೦ ರಂದು ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ. ಶೋಪಿಯಾನ್‌ನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಘಟನೆಯಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಕಾಶ್ಮೀರ ಝೋನ್‌ನ ಐಜಿಪಿ ವಿಜಯ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಓರ್ವ ಅಲ್ಟಾç ಉಗ್ರನನ್ನು ಆದಿಲ್ ವನಿ ಎಂದು ಗುರುತಿಸಲಾಗಿದ್ದು, ಈತ ಕಳೆದ ಶನಿವಾರ ನಡೆದ ಬಡಗಿಯ ಹತ್ಯೆಗೆ ಕಾರಣನಾಗಿದ್ದ ಎಂದು ಹೇಳಿದ್ದಾರೆ. ಎನ್‌ಕೌಂಟರ್ ಬಗ್ಗೆ ವಿವರಣೆ ನೀಡಿರುವ ಸೇನಾ ಅಧಿಕಾರಿಗಳು, ಎನ್‌ಕೌಂಟರ್ ಹಿನ್ನೆಲೆಯಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಡ್ರಗಡ್ ಹಾಗೂ ಶೋಪಿಯಾನ್ ಜಿಲ್ಲೆಗಳಲ್ಲಿ ಸೇನಾಧಿಕಾರಿಗಳು ಪ್ರಾರಂಭಿಸಿದ್ದು, ಇನ್ನೂ ಉಗ್ರರು ಇರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ. ಶೋಧ ಕಾರ್ಯಾಚರಣೆಯ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಎನ್‌ಕೌಂಟರ್ ನಡೆಸಬೇಕಾಯಿತು ಎಂದು ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್)ನ ಇಬ್ಬರು ಅಲ್ಟಾçಗಳು, ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾಗಿದ್ದರೆ, ಮೂವರು ಭದ್ರತಾ ಸಿಬ್ಬಂದಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದುವರೆದ ತೈಲೋತ್ಪನ್ನಗಳ ಬೆಲೆ ಏರಿಕೆ
ನವದೆಹಲಿ, ಅ. ೨೦: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ತಲಾ ೩೫ ಪೈಸೆ ಇಂದು ಬುಧವಾರ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ದೇಶಾದ್ಯಂತ ಇಂಧನ ದರವನ್ನು ಸತತವಾಗಿ ಹೆಚ್ಚಳ ಮಾಡುತ್ತಾ ಬಂದಿದ್ದು, ವಾಣಿಜ್ಯ ನಗರಿ ಮುಂಬೈಯಲ್ಲಿ ಪೆಟ್ರೋಲ್ ೧೧೨ ರೂಪಾಯಿ ೧೧ ಪೈಸೆಯಾಗಿದ್ದು, ಡೀಸೆಲ್ ಬೆಲೆ ೧೦೨ ರೂಪಾಯಿ ೮೯ ಪೈಸೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ ೧೦೬ ರೂಪಾಯಿ ೧೯ ಪೈಸೆ ಮತ್ತು ಡೀಸೆಲ್ ಬೆಲೆ ೯೪ ರೂಪಾಯಿ ೯೨ ಪೈಸೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ೧೦೯ ರೂಪಾಯಿ ೮೮ ಪೈಸೆಯಾದರೆ, ಪ್ರತೀ ಲೀಟರ್ ಡೀಸೆಲ್ ದರ ೧೦೦ ರೂಪಾಯಿ ೭೨ ಪೈಸೆಗೆ ಏರಿಕೆಯಾಗಿದೆ.
ಅನುಮೋದನೆ ಸಿಕ್ಕ ಬಳಿಕ ೧೬-೧೭ ವರ್ಷದ ಮಕ್ಕಳಿಗೆ ಲಸಿಕೆ
ಬೆಂಗಳೂರು, ಅ.೨೦: ಮಕ್ಕಳಿಗಾಗಿ ಸಿದ್ಧಪಡಿಸಲಾಗಿರುವ ಕೋವಿಡ್ ಲಸಿಕೆಗಳಿಗೆ ಅನುಮೋದನೆ ಸಿಕ್ಕ ಬಳಿಕ ೧೬-೧೭ ವರ್ಷದ ಮಕ್ಕಳಿಗೆ ಮೊದಲು ಲಸಿಕೆ ಹಾಕುವ ಸಾಧ್ಯತೆಗಳಿವೆ. ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಲಸಿಕೆ ಅತ್ಯಂತ ಮುಖ್ಯವಾಗಿದ್ದು, ಮಕ್ಕಳಿಗಾಗಿ ಈಗಾಗಲೇ ಎರಡು ಲಸಿಕೆಗಳು ಸಿದ್ಧಗೊಂಡಿವೆ. ಝೈಡಸ್ ಕ್ಯಾಡಿಲಾದ ಝೈಕೋವ್ ಡಿ ಮತ್ತು ಕೋವ್ಯಾಕ್ಸಿನ್ ಲಸಿಕೆಗಳಿಗೆ ಶೀಘ್ರದಲ್ಲೇ ಅನುಮೋದನೆ ಸಿಗಲಿದೆ.