ಮಡಿಕೇರಿ, ಅ.೧೯ : ಜಿಲ್ಲೆಯಲ್ಲಿ ಮಂಗಳವಾರ ೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧, ಸೋಮವಾರಪೇಟೆ ತಾಲೂಕಿನಲ್ಲಿ ೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೫,೧೭೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೪,೫೩೦ ಮಂದಿ ಗುಣಮುಖರಾಗಿದ್ದಾರೆ. ೨೧೪ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ. ಇದುವರೆಗೆ ಒಟ್ಟು ೪೨೮ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೬ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೦.೧೦ ಆಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.