*ಗೋಣಿಕೊಪ್ಪ, ಅ. ೧೯: ರೋಟರಿ ಜಿಲ್ಲಾ ರಾಜ್ಯಪಾಲ ರವೀಂದ್ರ ಭಟ್ ಅವರು ತಾ. ೨೪ ರಂದು ಗೋಣಿಕೊಪ್ಪ ರೋಟರಿ ಕ್ಲಬ್‌ಗೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷೆ ನೀತಾ ಕಾವೇರಮ್ಮ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ತಾ. ೨೪ ರಂದು ಬೆಳಿಗ್ಗೆ ೧೦.೩೦ಕ್ಕೆ ರೋಟರಿ ಸಂಸ್ಥೆಯ ವತಿಯಿಂದ ಗೋಣಿಕೊಪ್ಪಲು ರುದ್ರಭೂಮಿ ಅಭಿವೃದ್ಧಿ ಯೋಜನೆ, ಸಂಸ್ಕಾರ್ ಯೋಜನೆಗೆ ಗವರ್ನರ್ ಭೂಮಿಪೂಜೆ ನೆರವೇರಿಸಲಿದ್ದಾರೆ. ನಂತರ ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ಪಲ್ಸ್ ಪೊಲೀಯೋ ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೭ ಗಂಟೆಗೆ ಸ್ಪೆöÊಸ್ ರಾಕ್ ಹೊಟೇಲ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮೂವರನ್ನು ರೋಟರಿ ಸಂಸ್ಥೆಯ ಮೂಲಕ ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭ ಕಾರ್ಯದರ್ಶಿ ಜಪ್ಪೆಕೊಡಿ ಸುಭಾಷಿಣಿ ಹಾಜರಿದ್ದರು.