ಸೋಮವಾರಪೇಟೆ, ಅ. ೨೧: ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಅಲ್ಲಲ್ಲಿ ಮರಗಳು ಬಿದ್ದು ಸಂಚಾರಕ್ಕೆ ಸಮಸ್ಯೆಯಾಗಿತ್ತು.

ಸೋಮವಾರಪೇಟೆ-ಮಡಿಕೇರಿ ರಾಜ್ಯ ಹೆದ್ದಾರಿಯ ಹೊಸತೋಟ ಜಂಕ್ಷನ್‌ನಲ್ಲಿ ಇಂದು ಬೆಳಗ್ಗಿನ ಜಾವ ಮರ ಬಿದ್ದು ಸಂಚಾರಕ್ಕೆ ಸಮಸ್ಯೆಯಾಗಿತ್ತು. ಸ್ಥಳೀಯರು ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಅಂತೆಯೇ ನೆಲ್ಲಿಹುದಿಕೇರಿ-ಚೆಟ್ಟಳ್ಳಿ ಮಾರ್ಗ ಮಧ್ಯೆ ಅಭ್ಯತ್‌ಮಂಗಲದ ಬಳಿ ಇಂದು ಮಧ್ಯಾಹ್ನ ಮರ ಬಿದ್ದು ಕೆಲ ಸಮಯ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಸ್ಥಳೀಯರು ಮರವನ್ನು ಕಡಿದು ವಾಹನ ಸಂಚಾರಕ್ಕೆ ಎಡೆಮಾಡಿಕೊಟ್ಟರು.