ಮಡಿಕೇರಿ, ಅ. ೨೧: ದೇಶದಲ್ಲಿ ಕೋವಿಡ್ ನಿರೋಧಕ ಲಸಿಕೆ ವಿತರಣೆ ೧೦೦ ಕೋಟಿ ಡೋಸ್‌ಗಳು ದಾಟಿದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯ ಲಸಿಕಾ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು.

ಶಾಸಕ ಕೆ.ಜಿ. ಬೋಪಯ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿತಾ ಪೂವಯ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್, ರೆಡ್‌ಕ್ರಾಸ್ ಕಾರ್ಯದರ್ಶಿ ಮುರಳಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.