ಮಡಿಕೇರಿ, ಅ. ೨೨: ಬಾಂಗ್ಲಾ ದೇಶದಲ್ಲಿ ಹಿಂದೂ ದೇವಸ್ಥಾನಗಳ ದ್ವಂಸ, ಹಿಂದೂ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಖಂಡನೆ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಕ್ಕೇರ ಅಜಿತ್, ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ನಡೆಯುತ್ತಿರುವ ಅತ್ಯಾಚಾರ, ಹಲ್ಲೆ, ದೌರ್ಜನ್ಯಗಳನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸುತ್ತದೆ. ಭಾರತದಿಂದ ಹಲವು ರೀತಿಯ ಸಹಕಾರ ಪಡೆದಿರುವ ಬಾಂಗ್ಲಾ ಸರಕಾರ, ಅಲ್ಲಿನ ಮುಸ್ಲಿಂ ಮತಾಂಧರ ದುಷ್ಕೃತ್ಯಗಳನ್ನು ತಡೆಯುವಲ್ಲಿ ವಿಫಲವಾಗಿದ್ದು, ಜಿಹಾದಿ ಮತಾಂಧರ ನೀಚ ಕೃತ್ಯಗಳು ನಾಗರಿಕ ಸಮಾಜ ತಲೆತಗ್ಗಿಸುವಂತಿದೆ ಎಂದರು.
ಬಾAಗ್ಲಾದೇಶದಲ್ಲಿನ ಹಿಂದೂಗಳ ರಕ್ಷಣೆಗೆ ಕೇಂದ್ರ ಸರಕಾರ ಅಗತ್ಯ ಕ್ರಮಕೈಗೊಳ್ಳುವುದರ ಜೊತೆಗೆ ಅಲ್ಲಿನ ಸರಕಾರಕ್ಕೆ ಎಚ್ಚರಿಕೆ ನೀಡಬೇಕಾದ ಅನಿವಾರ್ಯತೆಯಿದೆ. ಬಾಂಗ್ಲಾ ದೇಶದಲ್ಲಿನ ಬಹುಸಂಖ್ಯಾತರು ಅಲ್ಲಿನ ಹಿಂದೂಗಳನ್ನು ಕಾಣುವ ದೃಷ್ಟಿಕೋನ ಬದಲಾಗಬೇಕಿದ್ದು, ಪ್ರಸ್ತುತ ಮತಾಂಧತೆಯೆನ್ನುವುದು ಇಡೀ ವಿಶ್ವಕ್ಕೆ ಸವಾಲಾಗಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹೇಶ್, ಪ್ರಚಾರ ಪ್ರಮುಖ್ ಕುಮಾರ್, ಮಾತೃ ಸುರಕ್ಷಾ ಪ್ರಮುಖ್ ಶಾಂತೆಯAಡ ತಿಮ್ಮಯ್ಯ, ಮಡಿಕೇರಿ ತಾಲೂಕು ಪ್ರ.ಕಾರ್ಯದರ್ಶಿ ಚೇತನ್, ವಿ.ಹೆಚ್.ಪಿ.ಯ ಸುರೇಶ್ ಮುತ್ತಪ್ಪ, ಬಜರಂಗದಳದ ವಿನಯ್, ಪಶ್ಚಿಮಘಟ್ಟ ಕಾರ್ಯಪಡೆಯ ರಾಜ್ಯಾಧ್ಯಕ್ಷ ರವಿ ಕುಶಾಲಪ್ಪ ಮತ್ತಿತರರು ಇದ್ದರು.