ಪೊನ್ನAಪೇಟೆ: ತಾಲೂಕು ಆಡಳಿತ, ವೀರಾಜಪೇಟೆ ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವೀರಾಜಪೇಟೆ ತಾಲೂಕಿನ ಆರ್ಜಿ ಪೆರುಂಬಾಡಿ ಗ್ರಾಮದಲ್ಲಿರುವ ವಾಲ್ಮೀಕಿ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ಉದ್ಘಾಟಿಸಿ, ಮº

Àರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ವಾಲ್ಮೀಕಿ ಮಹರ್ಷಿ ಒಂದು ಶಕ್ತಿ. ಸೂರ್ಯಚಂದ್ರರು ಇರುವವರೆಗೂ ವಾಲ್ಮೀಕಿ ಇದ್ದೇ ಇರುತ್ತಾರೆ. ರಾಮಾಯಣದ ಮೂಲಕ ಅವರು ಜಗತ್ತಿಗೆ ಹೇಳಿರುವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಗೋಣಿಕೊಪ್ಪಲು ಕಾವೇರಿ ಕಾಲೇಜು ಪ್ರಾಧ್ಯಾಪಕ ಪ್ರೊ. ಆರ್. ತಿಪ್ಪೇಸ್ವಾಮಿ ಮಾತನಾಡಿ, ಮನುಕುಲಕ್ಕೆ ಉತ್ತಮ ರೀತಿಯಲ್ಲಿ ಬದುಕಲು ಬೇಕಾದ ಎಲ್ಲಾ ರೀತಿಯ ಮೌಲ್ಯಗಳನ್ನು ವಾಲ್ಮೀಕಿ ಮಹರ್ಷಿ ರಾಮಾಯಣದಲ್ಲಿ ಅಳವಡಿಸಿದ್ದಾರೆ. ರಾಮಾಯಣ ದಲ್ಲಿರುವ ಅನೇಕ ವಿಚಾರಗಳನ್ನು ಬದುಕಿಗೆ ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಂಡು ಸಾಧನೆಯ ಮೆಟ್ಟಿಲೇರಲು ಪ್ರಯತ್ನಿಸಬೇಕು ಎಂದರು.

ವೀರಾಜಪೇಟೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗುರು ಶಾಂತಪ್ಪ, ಮಹರ್ಷಿ ವಾಲ್ಮೀಕಿಯ ಜೀವನ ಚರಿತ್ರೆಯ ಬಗ್ಗೆ ಮಾತನಾಡಿ, ವಾಲ್ಮೀಕಿ ರಾಮಾಯಣದಲ್ಲಿ ಎಲ್ಲಾ ರೀತಿಯ ಪಾತ್ರಗಳನ್ನು ಸೃಷ್ಟಿಸಿದ್ದು, ಪಾತ್ರಗಳ ಮೂಲಕ ಜಗತ್ತಿಗೆ ಮೌಲ್ಯಗಳನ್ನು ತಿಳಿಸಿಕೊಟ್ಟಿದ್ದಾರೆ ಎಂದರು.

ವೀರಾಜಪೇಟೆ ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಪಿ.ಟಿ. ಸುರೇಶ್ ಮಾತನಾಡಿ, ಪರಿಶಿಷ್ಟ ವರ್ಗಗಳಿಗೆ ಇರುವ ಮೀಸಲಾತಿಯ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಪಡೆದುಕೊಂಡು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಯಾವುದೇ ಒಂದು ಜನಾಂಗದ ಏಳಿಗೆ ಸಾಧ್ಯ ಎಂದರು.

ವೀರಾಜಪೇಟೆ ತಾಲೂಕು ಡಿವೈಎಸ್ಪಿ ಜಯಕುಮಾರ್ ಮಾತನಾಡಿದರು. ಸಾಹಿತಿ ವೈಲೇಶ್ ವಾಲ್ಮೀಕಿ ಮಹರ್ಷಿಯ ಬಗ್ಗೆ ಭಾಮಿನಿ ಷಟ್ಪದಿಯಲ್ಲಿ ತಾವೇ ರಚಿಸಿದ್ದ ಕವನವನ್ನು ವಾಚಿಸಿದರು.

ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶ್ರೀನಿವಾಸ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ವೀರಾಜಪೇಟೆ ತಾಲೂಕು ವಾಲ್ಮೀಕಿ ಸಂಘದ ಪ್ರಧಾನ ಕಾರ್ಯದರ್ಶಿ ಮುತ್ತುರಾಜ್, ಆರ್ಜಿ ಗ್ರಾ.ಪಂ. ಪಿಡಿಓ ಆರ್. ರಾಜನ್, ಗ್ರಾ.ಪಂ. ಉಪಾಧ್ಯಕ್ಷ ಉಪೇಂದ್ರ, ಗ್ರಾ.ಪಂ. ಸದಸ್ಯರಾದ ಸುನಿತಾ ಹರಿದಾಸ್, ಕವಿತ, ಫಾತಿಮ, ಜೋವಿಟಾ, ಜೋಸೆಫ್, ಬೋಪಣ್ಣ, ದೈಹಿಕ ಪರಿವೀಕ್ಷಕಿ ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆ, ಚೆಸ್ಕಾಂ, ಅಬಕಾರಿ ಇಲಾಖೆ ಸಿಬ್ಬಂದಿಗಳು ಹಾಗೂ ಇನ್ನಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ೨೦ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಶಿಕ್ಷಕಿ ಆರತಿ ಸುರೇಶ್ ಪ್ರಾರ್ಥಿಸಿ, ಕೋತೂರು ಆಶ್ರಮ ಶಾಲೆಯ ಮುಖ್ಯ ಶಿಕ್ಷಕ ವಿ.ಎಸ್. ಪ್ರಶಾಂತ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು. ತಾಲೂಕು ಪರಿಶಿಷ್ಟ ವರ್ಗಗಳ ಕಚೇರಿ ಅಧೀಕ್ಷಕ ಕೀರ್ತಿಕುಮಾರ್ ವಂದಿಸಿದರು.