ಮಡಿಕೇರಿ, ಅ. ೨೨: ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಸರ್ಕಾರದ ನಿಯಮ ಮತ್ತು ನಿರ್ದೇಶನದಂತೆ ಅರ್ಥಪೂರ್ಣ ವಾಗಿ ಆಚರಿಸಲು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು, ಕನ್ನಡ ರಾಜ್ಯೋತ್ಸವವು ನಾಡಹಬ್ಬವಾಗಿದ್ದು, ಯಾವುದೇ ರೀತಿ ಚ್ಯುತಿ ಬಾರದಂತೆ ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿತವಾಗಿ ಆಯೋಜನೆಗೆ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸುವಂತೆ ನಿರ್ದೇಶನ ನೀಡಿದರು.

ನಗರದ ವಿವಿಧ ವೃತ್ತಗಳಲ್ಲಿ ದೀಪಾಲಂಕಾರ ಮಾಡುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಕನ್ನಡ ರಾಜ್ಯೋತ್ಸವ ಆಚರಣೆ ಸಂಬAಧ ಸ್ವಾಗತ ಸಮಿತಿ, ಧ್ಜಜಾರೋಹಣ ಮತ್ತು ವೇದಿಕೆ, ಮತ್ತಿತರ ಉಪ ಸಮಿತಿಗಳಿಗೆ ನಿಯೋಜಿಸಿರುವ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಅವರು ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ಹಲವು ಸಲಹೆ ನೀಡಿದರು. ಜಿ.ಪಂ. ಉಪ ಕಾರ್ಯದರ್ಶಿ ಲಕ್ಷಿö್ಮ ಅವರು ಕಳೆದ ಬಾರಿಯ ಕಾರ್ಯಕ್ರಮ ಸಂಬAಧಿಸಿದAತೆ ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ತಹಶೀಲ್ದಾರರಾದ ಪಿ.ಎಸ್. ಮಹೇಶ್, ಗೋವಿಂದ ರಾಜು, ಯೋಗಾನಂದ, ಪ್ರಕಾಶ್, ಪೌರಾಯುಕ್ತ ರಾಮದಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ, ಲೋಕೋಪ ಯೋಗಿ, ಜಿ.ಪಂ. ಇಂಜಿನಿಯರ್‌ಗಳು, ವಿವಿಧ ಇಲಾಖೆ ಅಧಿಕಾರಿಗಳು ಕನ್ನಡ ರಾಜ್ಯೋತ್ಸವ ಆಚರಣೆ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.