ಸೋಮವಾರಪೇಟೆ, ಅ. ೨೨: ಸಮೀಪದ ಕಿರಗಂದೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆ ತಾ. ೨೬ ರಂದು ಬೆಳಿಗ್ಗೆ ೧೧ ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಎಸ್.ಕೆ. ರಘು ಅಧ್ಯಕ್ಷತೆ ಯಲ್ಲಿ ನಡೆಯಲಿದೆ ಎಂದು ಅಭಿವೃದ್ಧಿ ಅಧಿಕಾರಿ ರಜಿನಿ ತಿಳಿಸಿದ್ದಾರೆ. ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ತಾಲೂಕು ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್ ಸೇರಿದಂತೆ ಇನ್ನಿತರ ಇಲಾಖಾಧಿ ಕಾರಿಗಳು ಭಾಗವಹಿಸಲಿದ್ದಾರೆ.