ಬಿಜೆಪಿ ವಕ್ತಾರ ಅಜಿತ್ ಕರುಂಬಯ್ಯ

ಗೋಣಿಕೊಪ್ಪಲು, ಅ. ೨೨: ಕೊಡಗಿನ ವಿವಿಧ ಭಾಗಗಳಲ್ಲಿ ನಿರಂತರ ಮತಾಂತರಕ್ಕೆ ಪ್ರಚೋದನೆ ನೀಡುತ್ತಿರುವವರ ಮೇಲೆ ಬಿಜೆಪಿ ಪಕ್ಷದ ಕಾರ್ಯಕರ್ತರು, ಸಂಘ ಪರಿವಾರದ ಪ್ರಮುಖರು ಹದ್ದಿನ ಕಣ್ಣಿಟ್ಟಿದ್ದು ಇನ್ನು ಮುಂದಿನ ದಿನಗಳಲ್ಲಿ ಪೊಲೀಸರ ಸಮ್ಮುಖದಲ್ಲಿ ಮತಾಂತರಕ್ಕೆ ಪ್ರಚೋದನೆ ನೀಡುವವರ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಬಿಜೆಪಿ ತಾಲೂಕು ವಕ್ತಾರ ಕುಟ್ಟಂಡ ಅಜಿತ್ ಕರುಂಬಯ್ಯ ಹಾಗೂ ಸಹ ವಕ್ತಾರ ಪುಲಿಯಂಡ ಪೊನ್ನಣ್ಣ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇತ್ತೀಚೆಗೆ ಪೊನ್ನಂಪೇಟೆ ಸಮೀಪದ ಕಿರುಗೂರು ವ್ಯಾಪ್ತಿಯ ಮತ್ತೂರು ಗಿರಿಜನರ ಕಾಲೋನಿಯಲ್ಲಿ ವಾಸವಾಗಿರುವ ಮುಗ್ಧರನ್ನು ಮತಾಂತರಕ್ಕೆ ಪ್ರಚೋದನೆ ಮಾಡಿದ್ದಾರೆ. ಇದನ್ನು ಆಕ್ಷೇಪಿಸಿದ ಪಕ್ಷದ ಕಾರ್ಯಕರ್ತರು ಹಾಗೂ ಸಂಘ ಪರಿವಾರದವರ ಮೇಲೆ ಅನವಶ್ಯಕ ಪೊಲೀಸ್ ಮೊಖದ್ದಮೆ ದಾಖಲಿಸಲಾಗಿದೆ. ಮತಾಂತರವನ್ನು ಪ್ರಶ್ನಿಸಿದವರ ಮೇಲೆ ಪೊಲೀಸ್ ಪುಕಾರು ನೀಡಿ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಮೇಲೆ ಕ್ರಮಕ್ಕೆ ಒತ್ತಾಯಿಸಲಾಗುವುದು. ಅಲ್ಲದೆ ಈ ಬಗ್ಗೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು. ಮತಾಂತರ ಮಾಡುವವರ ಮೇಲೆ ಪೊಲೀಸರಿಗೆ ಮಾಹಿತಿ ನೀಡಿ ಸಕಾಲದಲ್ಲಿ ಕ್ರಮಕ್ಕೆ ಆಗ್ರಹಿಸಲಾಗುವುದು.

ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಕೊಡಗು ಜಿಲ್ಲೆಯನ್ನು ಮತಾಂತರ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪಕ್ಷ ಹಾಗೂ ಸಂಘ ಪರಿವಾರದಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಯೋಜನೆಗಳು ಆರಂಭಗೊAಡಿವೆ. ಅಕ್ರಮ ದನ ಸಾಗಾಟಕ್ಕೆ ಕಡಿವಾಣ ಹಾಕಲಾಗುವುದು ಪೊಲೀಸರು ಈ ನಿಟ್ಟಿನಲ್ಲಿ ಸಹಕರಿಸಬೇಕೆಂದು ಅಜಿತ್ ಕರುಂಬಯ್ಯ ಮನವಿ ಮಾಡಿದ್ದಾರೆ.