ಮಡಿಕೇರಿ, ಅ. ೨೨: ನರೇಂದ್ರಮೋದಿಯವರ ದೂರದೃಷ್ಟಿಯ ಫಲವಾಗಿ ೧೦೦ ಕೋಟಿ ಡೋಸ್‌ಗಳ ಕೋವಿಡ್ ಲಸಿಕೆ ನೀಡಿದ ವಿಶ್ವದ ಮೊದಲ ರಾಷ್ಟç ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ನಿರಂತರ ಪ್ರೋತ್ಸಾಹ ಮತ್ತು ವಿಜ್ಞಾನಿಗಳ ಪರಿಶ್ರಮದ ಫಲವಾಗಿ ಲಸಿಕೆ ಸಂಶೋಧನೆ ಸಾಧ್ಯವಾಗಿದೆ ಎಂದರು.

ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಮೋದಿಯವರ ದಿಟ್ಟ ನಿಲುವು ೧೦೦ ಕೋಟಿ ಡೋಸ್‌ಗಳ ಕೋವಿಡ್ ಲಸಿಕೆ ನೀಡಲು ಮುಖ್ಯ ಕಾರಣವಾಗಿದೆ. ರಾಷ್ಟçದಲ್ಲಿ ಕರ್ನಾಟಕ ೨ನೇ ಸ್ಥಾನ ಪಡೆದರೆ,

(ಮೊದಲ ಪುಟದಿಂದ) ಕೊಡಗು ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಕೆಲವರ ಅಪಪ್ರಚಾರದ ನಡುವೆಯೂ ಉತ್ತಮ ಸಾಧನೆ ಮಾಡಲಾಗಿದೆ. ಸದ್ಯ ಜಿಲ್ಲೆಯಲ್ಲಿ ೨ನೇ ಡೋಸ್ ಸುಮಾರು ೧೩,೦೦೦ ಗುರಿ ನೀಡಲಾಗಿದೆ ಎಂದು ತಿಳಿಸಿದರು.

ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಲಸಿಕೆ ವಿರುದ್ಧ ಅಪಪ್ರಚಾರ ಮಾಡುವುದು ಮೊದಲು ನಿಲ್ಲಬೇಕು. ಜಿಲ್ಲೆಯಲ್ಲಿ ಕೋವಿಡ್ ಲಸಿಕೆಗೆ ಕೊರತೆಯಿಲ್ಲ. ಮುಂದಿನ ದಿನಗಳಲ್ಲಿ ಮಕ್ಕಳಿಗೂ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿದಾನ ಪರಿಷದ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಮಹೇಶ್ ಜೈನಿ, ಬಿ.ಬಿ.ಭಾರತೀಶ್ ಇದ್ದರು.