ಕೂಡಿಗೆ, ಅ. ೨೨: ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿರುವ ಕಾವೇರಿ ಮಾತೆಯ ಪ್ರತಿಮೆಗೆ ಕಾವೇರಿ ನೀರಾವರಿ ನಿಗಮ ಹಾಗೂ ಹಾರಂಗಿ ನೀರಾವರಿ ಇಲಾಖೆಯ ವತಿಯಿಂದ ಪೂಜೆ ಸಲ್ಲಿಸಲಾಯಿತು.

ವರ್ಷಂಪ್ರತಿಯAತೆ ತಲಕಾವೇರಿಯಿಂದ ಕಾವೇರಿ ತೀರ್ಥವನ್ನು ತಂದು ಪೂಜಿಸಿ, ನಂತರ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಕಾವೇರಿ ತೀರ್ಥವನ್ನು ವಿತರಿಸಲಾಯಿತು. ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಮಾಡಲಾಯಿತು.

ಈ ಸಂದರ್ಭ ಕಾವೇರಿ ನೀರಾವರಿ ನಿಗಮ ಹಾರಂಗಿ ವಿಭಾಗದ ಅಭಿಯಂತರ ಚನ್ನಕೇಶವ, ಸಹಾಯಕ ಅಭಿಯಂತರ ನಾಗೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರಕುಮಾರ್, ಸಹಾಯಕ ಇಂಜಿನಿಯರ್ ಸಿದ್ದರಾಜ್, ಕಿರಣ್ ಸೇರಿದಂತೆ ಕುಶಾಲನಗರ ಮತ್ತು ಹಾರಂಗಿ ವಿಭಾಗ ಕಚೇರಿಯ ಸಿಬ್ಬಂದಿಗಳು, ಸ್ಥಳೀಯರು ಭಾಗವಹಿಸಿದ್ದರು.