ಶನಿವಾರಸಂತೆ, ಅ. ೨೪: ಕೊಡಗು ಜಿಲ್ಲಾಡಳಿತ ಹಾಗೂ ಸೋಮವಾರಪೇಟೆ ತಾಲೂಕು ಆಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ‘ನಡೆ ಹಳ್ಳಿಯ ಕಡೆ’ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ತಾ. ೩೦ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಹೊಸಗುತ್ತಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಹಾರೊಹಳ್ಳಿ, ಹೊಸಗುತ್ತಿ ಗ್ರಾಮಗಳಿಗೆ ಸಂಬAಧಿಸಿದ ಭೂಮಾಪನ ಇಲಾಖೆ ಹಾಗೂ ಆಹಾರ ಇಲಾಖೆಗಳಿಗೆ ಸಂಬAಧಿಸಿದ ಸಮಸ್ಯೆ ಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುವುದು.

ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಗ್ರಾಮಸ್ಥರು, ಗ್ರಾಮ ಮುಖಂಡರು ಹಾಗೂ ಜನಪ್ರತಿನಿಧಿಗಳು ಕಡ್ಡಾಯ ವಾಗಿ ಮಾಸ್ಕ್ ಧರಿಸಿ, ಅಂತರ ಕಾಪಾಡಿ ಕೊಂಡು ಪಾಲ್ಗೊಂಡು ಕಾರ್ಯಕ್ರಮ ವನ್ನು ಸದುಪಯೋಗಪಡಿಸಿ ಕೊಳ್ಳುವಂತೆ ತಹಶೀಲ್ದಾರ್ ಗೋವಿಂದ್ ರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.