ಮಡಿಕೇರಿ, ಅ. ೨೪: ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕೊಡಗು ಜಿಲ್ಲಾಧಿಕಾರಿ, ನಗರಸಭಾ ಆಯುಕ್ತರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಗಳ ಕಚೇರಿಗೆ ಭೇಟಿ ನೀಡಿ ಮಡಿಕೇರಿ ತಾಲೂಕು ಹಾಗೂ ಮಡಿಕೇರಿ ನಗರದಾದ್ಯಂತ ಅಂಗಡಿ ಮಳಿಗೆಗಳು ಹಾಗೂ ಹೊಟೇಲ್, ರೆಸಾರ್ಟ್, ಹೋಂಸ್ಟೇಗಳು ಹಾಗೂ ಪ್ರವಾಸಿ ತಾಣಗಳಲ್ಲಿ ಕನ್ನಡ ಕಡ್ಡಾಯ ಮಾಡುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ತಾಲೂಕು ಅಧ್ಯಕ್ಷ ರವಿ ಗೌಡ, ಮೂರ್ನಾಡು ಹೋಬಳಿ ಅಧ್ಯಕ್ಷ ವಸಂತ್, ಮಡಿಕೇರಿ ನಗರ ಅಧ್ಯಕ್ಷ ದೇವೋಜಿ, ನಗರ ಮಹಿಳಾ ಘಟಕದ ಅಧ್ಯಕ್ಷೆ ಮಿನಾಜ್ ಪ್ರವೀಣ್, ನಗರ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್, ಸಹ ಕಾರ್ಯದರ್ಶಿ ಚೇತನ್, ಸಂಘಟನಾ ಕಾರ್ಯದರ್ಶಿ ಶೇಖರ್, ಸದಸ್ಯರುಗಳಾದ ಗಜೇಂದ್ರ, ಶರಣ್ ಕುಮಾರ್ ಹಾಗೂ ಇನ್ನೂ ಹಲವು ಕಾರ್ಯಕರ್ತರು ಹಾಜರಿದ್ದರು.