ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್
ಚೆನ್ನೆöÊ, ಅ. ೨೫: ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೇಂದ್ರ ಸರ್ಕಾರ ಘೋಷಿಸಿದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಅವರು ಸೋಮವಾರ ಸ್ವೀಕರಿಸಿದ್ದು, ಪ್ರಶಸ್ತಿಯನ್ನು ತಮ್ಮ ಗುರು, ಖ್ಯಾತ ನಿರ್ದೇಶಕ ದಿ. ಕೆ. ಬಾಲಚಂದರ್ ಅವರಿಗೆ ಅರ್ಪಿಸಿದ್ದಾರೆ.
ಇಂದು ದೆಹಲಿಯಲ್ಲಿ ಉಪ ರಾಷ್ಟçಪತಿ ಎಂ. ವೆಂಕಯ್ಯ ನಾಯ್ಡು ಅವರು ನಟ ರಜನಿಕಾಂತ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಜನಿಕಾಂತ್ ಅವರು, ತಮ್ಮ ಹಿರಿಯ ಸಹೋದರ ಸತ್ಯನಾರಾಯಣ ರಾವ್, ಸಾರಿಗೆ ಸಹೋದ್ಯೋಗಿ ಮತ್ತು ಸ್ನೇಹಿತ ರಾಜ್ ಬಹದ್ದೂರ್, ತಮ್ಮ ಅಭಿಮಾನಿಗಳು, ಚಲನಚಿತ್ರ ನಿರ್ಮಾಪಕರು, ಸಹೋದ್ಯೋಗಿಗಳು ಮತ್ತು ಐದು ದಶಕಗಳಲ್ಲಿ ಅವಿರತ ಬೆಂಬಲ ನೀಡಿದ ತಮಿಳು ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು. ನಾನು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸುತ್ತಿರುವುದಕ್ಕೆ ಅತ್ಯಂತ ಸಂತೋಷವಾಗುತ್ತಿದೆ. ನಾನು ಈ ಪ್ರಶಸ್ತಿಯನ್ನು ನನ್ನ ಗುರು ಕೆ. ಬಾಲಚಂದರ್ ಸರ್ ಅವರಿಗೆ ಅರ್ಪಿಸುತ್ತೇನೆ ಎಂದು ಹೇಳಿದರು.