ಗುಡ್ಡೆಹೊಸೂರು, ಅ. ೨೪: ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯ ಒಂದು ಕೊಠಡಿಯ ಬೀಗ ಮುರಿದು ಕಳ್ಳರು ಒಳನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ಕಂಪ್ಯೂಟರ್ ಕೊಠಡಿಯ ಬೀಗ ಮುರಿಯುವ ಬದಲು ಬೇರೆ ಕೊಠಡಿಗೆ ನುಗ್ಗಿರುವ ಅನುಮಾನ ವ್ಯಕ್ತವಾಗಿದೆ. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಒಂದುವಾದ ಹಿಂದೆ ಇಲ್ಲಿನ ಸುರೇಶ ಎಂಬವರ ಅಂಗಡಿಗೆ ಕಳ್ಳರು ನುಗ್ಗಿ ಬೆಲೆಬಾಳುವ ತೂಕದ ಯಂತ್ರ ಮತ್ತು ವಸ್ತುಗಳನ್ನು ಕಳವು ಮಾಡಿದ್ದರು. ಇದೀಗ ಶಾಲೆಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ.