ಮಡಿಕೇರಿ, ಅ.೨೪: ಪ್ರಸಕ್ತ (೨೦೨೧-೨೨) ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನವೀನ(ಹೊಸ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಇಲಾಖಾ ವೆಬ್‌ಸೈಟ್ ತಿತಿತಿ.ssಠಿ. ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಶಾಲೆಯ ಸ್ಯಾಟ್ಸ್ ವೆಬ್‌ಸೈಟ್ hಣಣಠಿs://sಣs.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಲು ಮಡಿಕೇರಿ ತಾಲೂಕು ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ ಮೆಟ್ರಿಕ್ ನಂತರದ ೨.೫೦ ಲಕ್ಷ ಮತ್ತು ಮೆಟ್ರಿಕ್ ಪೂರ್ವ ಆದಾಯ ಮಿತಿ ರಿಂದ ೮ ತರಗತಿಗೆ ೨.೫೦ ಲಕ್ಷ ಮತ್ತು ೯ ರಿಂದ ೧೦ನೇ ತರಗತಿಗೆ ೬ ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಿರಬೇಕು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ), ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗೆ ದೂ: ೯೪೮೦೮೪೩೧೫೫ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.