ವೀರಾಜಪೇಟೆ, ಅ. ೨೫: ಬಾಂಗ್ಲಾ ದೇಶದಲ್ಲಿ ಹಿಂದೂ ದೇವಾಲಯ ಮತ್ತು ಹಿಂದೂ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿ ಮೆರವಣಿಗೆಯಲ್ಲಿ ತೆರಳಿ ತಹಶೀಲ್ದಾರ್ ಯೋಗಾನಂದ್ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಕ್ಕೆರ ಅಜಿತ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಬಾಂಗ್ಲಾ ದೇಶದಲ್ಲಿ ಹಲವಾರು ಹಿಂದೂ ದೇವಾಲಯ ಗಳನ್ನು ಕೆಡವಿ ಹಾಕಲಾಗಿದೆ. ನಿರಂತರವಾಗಿ ಹಿಂದೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರಗಳನ್ನು ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಮಧÀ್ಯ ಪ್ರವೇಶಿಸಿ ಅಲ್ಲಿನ ಹಿಂದೂಗಳಿಗೆ ವಿಶೇಷ ಕಾನೂನನ್ನು ರೂಪಿಸುವಂತೆ ಒತ್ತಡ ಹೇರಬೇಕು. ಅದೇ ರೀತಿ ಜಿಲ್ಲೆಯಲ್ಲೂ ಬಾಂಗ್ಲಾ ದೇಶಿಗರ ಉಪಟಳ ಹೆಚ್ಚಾಗುತ್ತಿದೆ. ಪೊಲೀಸ್ ಇಲಾಖೆಗೆ ಎಲ್ಲಾ ಮಾಹಿತಿಗಳಿದ್ದರೂ ಆರೋಪಿಗಳನ್ನು ಬಂಧಿಸದೆ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆ ಸಂದರ್ಭ ತಾಲೂಕು ಅಧ್ಯಕ್ಷ ಯೋಗೇಶ್, ಪ್ರಧಾನ ಕಾರ್ಯದರ್ಶಿ ಅನಿಲ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ, ಸ್ಥಾಯಿ ಸಮಿತಿ ಅಧ್ಯಕ್ಷ ಸುನಿತಾ ಜೂನಾ, ಮುಖಂಡರಾದ ಅಮ್ಮಣಿಚಂಡ ರಂಜು, ಮಾದೇಯಂಡ ಹ್ಯಾರಿ, ಚಂಗಪ್ಪ, ರಾಷ್ಟಿçÃಯ ಸ್ವಯಂ ಸೇವಕ ಸಂಘದ ಉದ್ಘೋಷ್ ಪ್ರಮುಖ್ ಹೇಮಂತ್, ಮತ್ತಿತರರು ಪಾಲ್ಗೊಂಡಿದ್ದರು.